ವಿಜಯಸಾಕ್ಷಿ ಸುದ್ದಿ, ಗದಗ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ 2025-26ನೇ ಸಾಲಿನ ಯು.ಪಿ.ಎಸ್.ಸಿ ಹಾಗೂ ಬ್ಯಾಂಕಿಂಗ್ ಪಿ.ಓ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಉನ್ನತ ಶೈಕ್ಷಣಿಕ ವ್ಯಾಸಂಗ ಮಾಡಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಈ ತರಬೇತಿಯ ಸದುಪಯೋಗಪಡಿಸಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ರಾಜ್ಯ ಸರಕಾರಿ ನೌಕರ ಸಂಘದ ಗದಗ ಜಿಲ್ಲಾಧ್ಯಕ್ಷ ಹಾಗೂ ಗದಗ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ತಾಲೂಕು ಅಧಿಕಾರಿ ಡಾ. ಬಸವರಾಜ ಬಳ್ಳಾರಿ ಹೇಳಿದ್ದಾರೆ.
2025-26ನೇ ಸಾಲಿನ ಯು.ಪಿಎಸ್.ಸಿ ಹಾಗೂ ಬ್ಯಾಂಕಿಂಗ್ ಪಿ.ಓ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿಯನ್ನು 2ಎ, 3ಎ. 3ಬಿ ವಿದ್ಯಾರ್ಥಿಗಳು ಪಡೆಯಬಹುದು ಆನ್‌ಲೈನ್ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ-8050370006 ಸಂಖ್ಯೆಗೆ ಸಾರ್ವಜನಿಕ ರಜಾ ದಿನಗಳನ್ನು ಹೊರತುಪಡಿಸಿ ಬೆಳಿಗ್ಗೆ 10ರಿಂದ ಸಂಜೆ 5.30ರೊಳಗಾಗಿ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತ ಅಕ್ರಂ ಪಾಷ ಹಾಗೂ ಸರಕಾರದ ಕಾರ್ಯದರ್ಶಿ ಸಂಜಯ ಶೆಟ್ಟೆಣ್ಣವರ ಮಾಹಿತಿ ನೀಡಿರುವುದಾಗಿ ಡಾ. ಬಸವರಾಜ ಬಳ್ಳಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.