ಉಚಿತ ನೇತ್ರ ತಪಾಸಣಾ ಶಿಬಿರ

0
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷೇಶ್ವರ: ಶಂಕರ ಕಣ್ಣಿನ ಆಸ್ಪತ್ರೆ ಶಿವಮೊಗ್ಗ, ಕರ್ನಾಟಕ ರಾಜ್ಯ ಹಿರಿಯ ನಾಗರಿಕರ ಹಾಗೂ ನಿವೃತ್ತ ನೌಕರರ ಸಂಘ, ತಾಲೂಕು ವೈದ್ಯರ ಸಂಘ ಲಕ್ಷೇಶ್ವರ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿಸಿ ಟ್ರಸ್ಟ್ ಶಿರಹಟ್ಟಿ/ಲಕ್ಷೇಶ್ವರ, ವಿಶ್ವ ಕಂಪ್ಯೂಟರ್ ಅಕಾಡೆಮಿ, ಶಿರಹಟ್ಟಿ ತಾಲೂಕು ಔಷಧ ವ್ಯಾಪಾರಸ್ಥರ ಸಂಘ ಲಕ್ಷೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಜ್ಯೋತಿ ನರ್ಸಿಂಗ್ ಹೋಂನಲ್ಲಿ 9ನೇ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು.

Advertisement

ಕರ್ನಾಟಕ ರಾಜ್ಯ ಹಿರಿಯ ನಾಗರಿಕರ ಹಾಗೂ ನಿವೃತ್ತ ನೌಕರರ ಸಂಘದ ಸಿ.ಆರ್. ಲಕ್ಕುಂಡಿಮಠ ಶಿಬಿರ ಉದ್ಘಾಟಿಸಿ ಮಾತನಾಡಿ, ಬಡ ಜನತೆಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಪ್ರತಿ ತಿಂಗಳು ಉಚಿತ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ನಡೆಸಿಕೊಂಡು ಬರಲಾಗುತ್ತಿದೆ. ಶಿಬಿರದ ಬಗ್ಗೆ ಮಾಹಿತಿ ಪಡೆದುಕೊಂಡು ಜನರು ಅದರ ಉಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಡಾ. ಪಿ.ಡಿ. ತೋಟದ ಮಾತನಾಡಿ, ಆರ್ಥಿಕವಾಗಿ ಹಿಂದುಳಿದಿರುವ ಬಡ ಜನರಿಗೆ ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಲಾಗುತ್ತಿದೆ. ಶಿಬಿರದಲ್ಲಿ ಶಸ್ತ್ರಚಿಕಿತ್ಸೆಗೆ ಅರ್ಹರಾದವರಿಗೆ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ ಲೆನ್ಸ್ ಅಳವಡಿಸಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಚಂಬಣ್ಣ ಬಾಳಿಕಾಯಿ, ಎನ್.ವಿ. ಹೇಮಗಿರಿಮಠ, ಪ್ರಕಾಶ ಉಪನಾಳ, ಬಸವರಾಜ ಸಂಗಪ್ಪ ಶೆಟ್ಟರ, ಡಾ. ರಾಧಿಕಾ, ಶಕುಂತಲಾ ಅಳಗವಾಡಿ, ನಾಗರಾಜ ಸೂರಣಗಿ, ಡಾ. ನಾಗರಾಜ ವಾಲಿ, ಡಾ. ಪ್ರಸನ್ ಕುಲಕರ್ಣಿ, ಡಾ. ಅಮರೇಶ ಅಮರಶೆಟ್ಟರ, ಡಾ. ಎಂ.ಆರ್. ಕಲಿವಾಳ, ಪುನೀತ್ ಓಲೆಕಾರ, ಐ.ಎಸ್. ಮಡಿವಾಳರ ಇದ್ದರು.

ಶಿಬಿರದಲ್ಲಿ 250 ಜನರ ನೇತ್ರ ತಪಾಸಣೆ ನಡೆಸಲಾಯಿತು. ಅದರಲ್ಲಿ 43 ಜನರನ್ನು ಚಿಕಿತ್ಸೆಗೆ ಆಯ್ಕೆ ಮಾಡಿ ಅವರನ್ನು ಆಸ್ಪತ್ರೆಯ ವಾಹನದಲ್ಲಿಯೇ ಶಿವಮೊಗ್ಗದ ಆಸ್ಪತ್ರೆಗೆ ಕಳುಹಿಸಿ ಕೊಡಲಾಯಿತು.


Spread the love

LEAVE A REPLY

Please enter your comment!
Please enter your name here