HomeGadag Newsಉಚಿತ ನೇತ್ರ ತಪಾಸಣಾ ಶಿಬಿರ

ಉಚಿತ ನೇತ್ರ ತಪಾಸಣಾ ಶಿಬಿರ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಪಂಚಾಕ್ಷರಿ ನಗರದಲ್ಲಿ ಜ್ಞಾನವಿಕಾಸ ಕೇಂದ್ರದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ 78ನೇ ಜನ್ಮದಿನದ ಪ್ರಯುಕ್ತ ಉಚಿತ ನೇತ್ರ ತಪಾಸಣಾ ಶಿಬಿರ ಜರುಗಿತು.

ಕಾರ್ಯಕ್ರಮವನ್ನು ತಾಲ್ಲೂಕಿನ ಯೋಜನಾಧಿಕಾರಿ ಉಮಾ ಉದ್ಘಾಟಿಸಿದರು. ಡಾ. ಸುವರ್ಣ ನಿಡುಗುಂದಿ ಅವರು ಸದಸ್ಯರಿಗೆ ಆರೋಗ್ಯದ ಬಗ್ಗೆ ಗಮನಹರಿಸುವುದರ ಬಗ್ಗೆ ಮಾಹಿತಿಯನ್ನು ನೀಡಿದರು. ಡಾ. ಮಹಾಂತೇಶ ಚಪ್ಪನಮಠ ಅವರು ಕಣ್ಣುಗಳ ಸಂರಕ್ಷಣೆಯಲ್ಲಿ ನಮ್ಮ ಆಹಾರ ಪದ್ಧತಿ ಹೇಗೆ ಇರಬೇಕು ಎಂದು ಮಾಹಿತಿ ನೀಡಿದರು.

ರೋಟರಿ ಕ್ಲಬ್ ಅಧ್ಯಕ್ಷ ಶ್ರೀಧರ ಸುಲ್ತಾನಪುರ ಹಾಗೂ ಕಾರ್ಯದರ್ಶಿ ಸುರೇಶ್ ಕುಂಬಾರ, ಈಶ್ವರ ದೇವಸ್ಥಾನ ಕಮಿಟಿಯ ಸದಸ್ಯರಾದ ಮಲ್ಲಿಕಾರ್ಜುನ ಸಂತೋಜಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ 99 ಜನರಿಗೆ ಉಚಿತ ನೇತ್ರ ತಪಾಸಣೆ ಮಾಡಿ ರೋಟರಿ ಕ್ಲಬ್ ವತಿಯಿಂದ ಕೆಲವು ಸದಸ್ಯರಿಗೆ ಉಚಿತ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿಶ್ರೀ ಸಲ್ಲಪಟ್ಟಿ ವಹಿಸಿದ್ದರು. ವಲಯದ ಮೇಲ್ವಿಚಾರಕಿ ಶಿಲ್ಪಾ, ಜ್ಞಾನವಿಕಾಸ ಸಮನ್ವಯ ಅಧಿಕಾರಿ ಗಂಗಮ್ಮ, ಸೇವಾ ಪ್ರತಿನಿಧಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!