ವಿಜಯಸಾಕ್ಷಿ ಸುದ್ದಿ, ಹುಲಕೋಟಿ : ನಾಡು ಮೆಚ್ಚಿದ ಜನನಾಯಕ ದಿ. ಕೆ.ಎಚ್. ಪಾಟೀಲರ ಜಯಂತ್ಯುತ್ಸವದ ಅಂಗವಾಗಿ ಕೆ.ಎಚ್ ಪಾಟೀಲ ಆಸ್ಪತ್ರೆ ಹಾಗೂ ಸಂಶೋಧನಾ ಸಂಸ್ಥೆ ಹುಲಕೋಟಿ, ಎಂ.ಎಂ. ಜೋಶಿ ಕಣ್ಣಿನ ಆಸ್ಪತ್ರೆ ಹುಬ್ಬಳ್ಳಿ ಇವರ ಸಹಯೋಗ, ಗದಗ ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗದಗ ಇವರ ಸಹಕಾರದಿಂದ ಇತ್ತೀಚೆಗೆ ಉಚಿತವಾಗಿ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆಯನ್ನು ಹುಲಕೋಟಿಯ ಕೆ.ಎಚ್. ಪಾಟೀಲ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಸಂಸ್ಥೆಯ ಚೇರಮನ್ ಡಾ. ಎಸ್.ಆರ್. ನಾಗನೂರ ಹಾಗೂ ಗೌರವ ಕಾರ್ಯದರ್ಶಿ ಡಾ. ವೇಮನ್ ಆರ್.ಸಾವಕಾರ ಈ ಶಿಬಿರದಲ್ಲಿ ಉಪಸ್ಥಿತರಿದ್ದು ಮಾರ್ಗದರ್ಶನ ಮಾಡಿದರು. ಎಂ.ಎಂ. ಜೋಶಿ ಆಸ್ಪತ್ರೆಯ ವೈದ್ಯರಿಂದ 13 ಫಲಾನುಭವಿಗಳಿಗೆ ಶಸ್ತ್ರಚಿಕಿತ್ಸೆಯನ್ನು ನಡೆಸಲಾಯಿತು. ಇದಕ್ಕೂ ಮೊದಲು ಫಲಾನುಭವಿಗಳಿಗೆ ಉಚಿತವಾಗಿ ಬಿಪಿ, ಶುಗರ್, ರಕ್ತ ತಪಾಸಣೆ ಮಾಡಲಾಯಿತು.
ಶಿಬಿರದಲ್ಲಿ ಕೆ.ಎಚ್. ಪಾಟೀಲ ಆಸ್ಪತ್ರೆಯ ಸಿಬ್ಬಂದಿಗಳು ಪಾಲ್ಗೊಂಡು ಸಹಾಯ-ಸಹಕಾರ ನೀಡಿ ಶಿಬಿರದ ಯಶಸ್ಸಿಗೆ ಶ್ರಮಿಸಿದರು.