“ಉಚಿತ ಕೊಡುಗೆ ಎಂಬುದು ಅಪಾಯಕಾರಿ ಪದ”: ಗ್ಯಾರಂಟಿಗಳ ಬಗ್ಗೆ RV ದೇಶಪಾಂಡೆ ಹೇಳಿದ್ದೇನು..?

0
Spread the love

ಉತ್ತರ ಕನ್ನಡ: ಜನರಿಗೆ ಏನನ್ನೂ ಉಚಿತವಾಗಿ ನೀಡಬಾರದು ಮತ್ತು ಪ್ರತಿಯೊಂದು ಸೇವೆಗೂ ಶುಲ್ಕ ನಿಗದಿಪಡಿಸಬೇಕು ಎಂದು ಆರ್​ವಿ ದೇಶಪಾಂಡೆ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಅಂಬೇವಾಡಿಯಲ್ಲಿ ಮಾತನಾಡಿದ ಅವರು,

Advertisement

ಉಚಿತ ಕೊಡುಗೆ ಎಂಬುದು ಅಪಾಯಕಾರಿ ಪದ. ಜನರಿಗೆ ಏನನ್ನೂ ಉಚಿತವಾಗಿ ನೀಡಬಾರದು ಮತ್ತು ಪ್ರತಿಯೊಂದು ಸೇವೆಗೂ ಶುಲ್ಕ ನಿಗದಿಪಡಿಸಬೇಕು.

ಅದಲ್ಲದೆ ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತ ಬಸ್ ಪ್ರಯಾಣವನ್ನು ಆನಂದಿಸುತ್ತಿದ್ದಾರೆ. ಈ ಯೋಜನೆಯನ್ನು ಪುರುಷರಿಗೂ ವಿಸ್ತರಿಸಬೇಕೆಂಬ ಬೇಡಿಕೆ ಇತ್ತು. ಎಲ್ಲವನ್ನೂ ಉಚಿತವಾಗಿ ನೀಡಿದರೆ ನಾವು ಸಾರಿಗೆ ಸಂಸ್ಥೆಗಳನ್ನು ನಡೆಸುವುದು ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಿಗೆ ಇದೀಗ ಸ್ವತಃ ಕಾಂಗ್ರೆಸ್ ಶಾಸಕ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರೂ ಆಗಿರುವ ಆರ್‌.ವಿ. ದೇಶಪಾಂಡೆ ಅವರಿಂದಲೇ ವಿರೋಧ ವ್ಯಕ್ತವಾಗಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.


Spread the love

LEAVE A REPLY

Please enter your comment!
Please enter your name here