ಗದಗ: ಗದಗ ನಗರದ ಮುಳಗುಂದನಾಕಾ ಬಳಿಯ ಶ್ರೀ ಅಡವೀಂದ್ರಸ್ವಾಮಿ ಮಠದ ಆವರಣದಲ್ಲಿ ದಸರಾ ಮಹೋತ್ಸವ ಮತ್ತು ಶ್ರೀದೇವಿ ಪುರಾಣ ಪ್ರವಚನ ಕಾರ್ಯಕ್ರಮದಲ್ಲಿ ರವಿವಾರ ಗದಗ ಮೆಡಿಕಲ್ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಡಾ. ವೀರೇಶ ದ್ಯಾವಣ್ಣವರ ಹಾಗೂ ಡಾ. ಅಭಿಷೇಕ ವಿ.ಹೊಸಳ್ಳಿಮಠ ಅವರ ತಂಡದವರಿಂದ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಜರುಗಿತು. ನೂರಾರು ಜನರು ಆರೊಗ್ಯ ತಪಾಸಣೆ ಮಾಡಿಸಿಕೊಂಡು ಸಲಹೆ ಹಾಗೂ ಚಿಕಿತ್ಸೆ ಪಡೆದರು.



