ಬೆಂಗಳೂರು:- ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಂಡಿರುವ ಹಿನ್ನೆಲೆ ಉದ್ಯಾನವನವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
ಬ್ರ್ಯಾಂಡ್ ಬೆಂಗಳೂರು ಹೆಸರಿನಡಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಫ್ರೀಡಂ ಪಾರ್ಕ್ನಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಫ್ರೀಡಂ ಪಾರ್ಕ್ನಲ್ಲಿ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡ ನಂತರ ಹೋರಾಟಗಾರರು, ನಡಿಗೆದಾರರು, ಪ್ರತಿಭಟನೆ, ಚಿತ್ರೀಕರಣ, ಸಾರ್ವಜನಿಕರಿಗೆ ಇತರೆ ಉದ್ದೇಶಗಳಿಗೆ ಅವಕಾಶ ಕಲ್ಪಿಸಲು ತೀರ್ಮಾನ ಮಾಡಲಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ 5 ಕೋಟಿ ರೂ ವೆಚ್ಚದಲ್ಲಿ ಶೌಚಾಲಯ, ಹೋರಾಟಗಾರರಿಗೆ ಮೂಲ ಸೌಕರ್ಯ ಕಲ್ಪಿಸುವ ಕಾಮಗಾರಿ ತೀವ್ರಗತಿಯಿಂದ ಸಾಗಿದೆ. ಇದೀಗ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ನೀರಿನ ಸೌಲಭ್ಯವೂ ಸಹ ಇಲ್ಲವಾಗಿದೆ. ಇಲ್ಲಿ ಶಾಶ್ವತ ಕಾಮಗಾರಿ ಪೂರ್ಣಗೊಳ್ಳುವವರೆಗೆ ಪ್ರತಿಭಟನೆ ನಡೆಸಲು ಪೊಲೀಸರು ಅನುಮತಿ ನೀಡುವುದನ್ನು ನಿಲ್ಲಿಸಲು ಮನವಿ ಮಾಡಲಾಗಿದೆ. ಇದೇ ವಾರದಲ್ಲಿ ಪ್ರತಿಭಟನೆಗೆ ಅವಕಾಶ ಕೊಡದಿರಲು ಚಿಂತನೆ ಮಾಡಲಾಗಿದೆ. ಈ ಬಗ್ಗೆ ಮಾತನಾಡಿದ ನಡಿಗೆದಾರರು, ಫ್ರೀಡಂ ಪಾರ್ಕ್ ಕ್ಲೋಸ್ ಮಾಡಿದ್ದರಿಂದ ನಮಗೆ ವಾಕ್ ಮಾಡಲು ಆಗುತ್ತಿಲ್ಲ. ಇದರಿಂದ ತುಂಬಾ ಸಮಸ್ಯೆ ಆಗುತ್ತಿದೆ ಎಂದಿದ್ದಾರೆ.
ಒಟ್ಟಾರೆ ಈಗಾಗಲೇ ಅಭಿವೃದ್ಧಿ ಕಾಮಗಾರಿಗಾಗಿ ಫ್ರೀಡಂ ಪಾರ್ಕ್ ಕ್ಲೋಸ್ ಮಾಡಲಾಗಿದೆ. ಇದರಿಂದ ಹೋರಾಟಗಾರಿಗೆ ಸಮಸ್ಯೆ ಆಗುತ್ತಿದ್ದು, ಆದಷ್ಟು ಬೇಗ ಕಾಮಗಾರಿ ಮುಗಿಸಿ ಪಾರ್ಕ್ ಓಪನ್ ಮಾಡಲಿ ಎಂಬ ಆಗ್ರಹ ವ್ಯಕ್ತವಾಗಿದೆ.


