ಕೆಎಲ್‌ಇ ಔಷಧ ಮಹಾವಿದ್ಯಾಲಯದಲ್ಲಿ ಫ್ರೆಶರ್ಸ್ ಡೇ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗದಗಿನ ಕೆಎಲ್‌ಇ ಸಂಸ್ಥೆಯ ಔಷಧ ಮಹಾವಿದ್ಯಾಲಯದಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು 2024-25 ಸಾಲಿನ ಬಿ.ಫಾರ್ಮ ಮತ್ತು ಡಿ.ಫಾರ್ಮ ವಿದ್ಯಾರ್ಥಿಗಳಿಗೆ ಫ್ರೆಶರ್ಸ್ ಡೇ ಕಾರ್ಯಕ್ರಮ `ಫಾರ್ಮ ಸಂಭ್ರಮ’ ಆಯೋಜಿಸಲಾಗಿತ್ತು.

Advertisement

ಈ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಅತಿಥಿಗಳು ಚಾಲನೆ ನೀಡಿದರು. ಮುಖ್ಯ ಅತಿಥಿಯಾಗಿ ಸಹಾಯಕ ಔಷಧ ನಿಯಂತ್ರಕ ನೀಲಕಂಠ ರಾಠೋಡ್ ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ರಮೇಶ ವ್ಹಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಗಮಿಸಿದ ನೀಲಕಂಠ ರಾಠೋಡ್ ವಿದ್ಯಾರ್ಥಿಗಳಿಗೆ ಅವರ ಭವಿಷ್ಯದ ಸಾಧನೆಗಳಿಗೆ ಮಾರ್ಗದರ್ಶನ ನೀಡಿದರು.

ಪ್ರಾಂಶುಪಾಲ ಡಾ. ರಮೇಶ ವ್ಹಿ ಮಹಾವಿದ್ಯಾಲಯದ ವಾರ್ಷಿಕ ವರದಿಯನ್ನು ಓದಿದರು. ನಂತರ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಶಂಸಾ ಪತ್ರಗಳನ್ನು ವಿತರಿಸಲಾಯಿತು.


Spread the love

LEAVE A REPLY

Please enter your comment!
Please enter your name here