ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಬಾಲ ವಿನಾಯಕ ವಿದ್ಯಾನಿಕೇತನ ಶಾಲೆಯ ೩೯ನೇ ವಾರ್ಷಿಕ ಸ್ನೇಹ ಸಮ್ಮೇಳನವು ಡಿ. ೨೭ರಂದು ಜರಗಲಿದೆ. ಪೂರ್ವ ಪ್ರಾಥಮಿಕ ಮತ್ತು ಕಿರಿಯ ಪ್ರಾಥಮಿಕ ವಿದ್ಯಾರ್ಥಿಗಳ ಕಾರ್ಯಕ್ರಮವು ಮುಂಜಾನೆ ೯.೩೦ ಗಂಟೆಗೆ ಜರಗುವುದು ಹಾಗೂ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳ ವಾರ್ಷಿಕೋತ್ಸವು ಸಾಯಂಕಾಲ ೪.೩೦ಕ್ಕೆ ಸಂಭಾಪೂರ ರಸ್ತೆಯಲ್ಲಿರುವ ಶಾಲಾ ಆವರಣದಲ್ಲಿ ನಡೆಯಲಿದೆ.
Advertisement
ಮುಂಜಾನೆಯ ಸಮಾರಂಭದ ಮುಖ್ಯ ಅತಿಥಿಗಳಾಗಿ ಗದುಗಿನ ಹೆಸರಾಂತ ವೈದ್ಯರಾದ ಡಾ. ಪ್ರಕಾಶ ಸಂಕನೂರ ಹಾಗೂ ಸಾಯಂಕಾಲದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಕ್ಕಳ ಕಲ್ಯಾಣಕ್ಕಾಗಿ ರಾಷ್ಟçಪ್ರಶಸ್ತಿ ವಿಜೇತ, ಮಹೇಶ ಫೌಂಡೇಶನ್‌ನ ಸಂಸ್ಥಾಪಕರು ಮತ್ತು ಅಧ್ಯಕ್ಷರಾದ ಮಹೇಶ ಜಾಧವ ಆಗಮಿಸಲಿದ್ದಾರೆ. ಶಾಲೆಯ ಆಡಳಿತ ಮಂಡಳಿಯ ಸದಸ್ಯರು, ಪ್ರಾಚಾರ್ಯರು ಮತ್ತು ಸಮಸ್ತ ಸಿಬ್ಬಂದಿ ವರ್ಗದವರು ಸರ್ವರಿಗೂ ಸ್ವಾಗತ ಕೋರಿದ್ದಾರೆ.