ಬೆಂಗಳೂರು:- ಸಚಿವ ಈಶ್ವರ್ ಖಂಡ್ರೆ ವಿರುದ್ಧ ಬೀದರ್ ಜಿಲ್ಲಾ ಕಾಂಗ್ರೆಸ್ ನಾಯಕರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ದೂರು ನೀಡಿದ್ದಾರೆ.
Advertisement
ಬಿಜೆಪಿ ನಾಯಕರೊಂದಿಗೆ ಕೈ ಜೋಡಿಸುತ್ತಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹಾಗೂ ಜಿಲ್ಲಾಧ್ಯಕ್ಷ ಇಬ್ಬರನ್ನು ಬದಲಿಸಿ ಎಂದು ಮಾಜಿ ಸಚಿವ ರಾಜಶೇಖರ ಪಾಟೀಲ್ ಹುಮ್ನಾಬಾದ್ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ನಾಯಕರು ದೂರು ಸಲ್ಲಿಸಿದ್ದಾರೆ.
ಜಿಲ್ಲೆಯಲ್ಲಿ ಬಿಜೆಪಿ ಮನಃಸ್ಥಿತಿಯ ಅಧಿಕಾರಿಗಳು ಇದ್ದಾರೆ, ಹೀಗಾಗಿ ಅವರನ್ನು ಬದಲಿಸಿ ಎಂದು ಮನವಿ ಮಾಡಿ, ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದು ಬಂದಿದೆ.