ಇನ್ಮುಂದೆ ಹಣದ ಬದಲು 10 ಕೆಜಿ ಅಕ್ಕಿಯನ್ನು ನೀಡಲಾಗುವುದು: ಸಚಿವ ಕೆ. ಹೆಚ್ ಮುನಿಯಪ್ಪ

0
Spread the love

ಬೆಂಗಳೂರು: ಇನ್ಮುಂದೆ ಹಣದ ಬದಲು 10 ಕೆಜಿ ಅಕ್ಕಿಯನ್ನು ನೀಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆಹೆಚ್ಮುನಿಯಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದೇ ತಿಂಗಳಿಂದ ಅಕ್ಕಿಯನ್ನು ಫಲಾನುಭವಿಗಳಿಗೆ ಕೊಡುತ್ತಿದ್ದೇವೆ.

Advertisement

ನಮಗೆ ಬೇಕಾಗಿರುವ 5 ಕೆಜಿ ಅಕ್ಕಿಯನ್ನು ಕೊಡಲು ಕೇಂದ್ರ ಸರ್ಕಾರವು ಒಪ್ಪಿಗೆ ಕೊಟ್ಟಿದೆ. ಪ್ರತಿ ತಿಂಗಳಿಗೆ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಅವಶ್ಯಕತೆ ಇದೆ. ವರ್ಷಕ್ಕೆ 27.48 ಲಕ್ಷ ಮೆಟ್ರಿಕ್ ಅಕ್ಕಿ ಅವಶ್ಯಕತೆ ಇದೆ ಎಂದು ಹೇಳಿದರು.

ನಮ್ಮ ಇಲಾಖೆ ಅಧಿಕಾರಿಗಳು ಬರೆದ ಪತ್ರಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಸ್ಪಂದಿಸಿದ್ದಾರೆ. ಈಗ ಕೇಂದ್ರ ಸಚಿವರು ಅಕ್ಕಿಕೊಡುವುದಕ್ಕೆ ಒಪ್ಪಿಕೊಂಡಿದ್ದಾರೆ. ರಾಜ್ಯದ ಜನರಿಗೆ ಈಗಾಗಲೇ ನವೆಂಬರವರೆಗೂ ಹಣ ನೀಡಿದ್ದೇವೆ. ಜನವರಿವರೆಗೆ ಹಣವನ್ನು ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ ಹಾಕುತ್ತೇವೆ. ಫೆಬ್ರವರಿಯಿಂದ 10 ಕೆಜಿ ಅಕ್ಕಿ ಕೊಡುವ ತೀರ್ಮಾನ ಮಾಡಿದ್ದೇವೆ. 2013ರಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೊಳಿಸಲಾಗಿದೆ. ನಾವು ನುಡಿದಂತೆ ನಡೆದಿದ್ದೇವೆ. ರಾಜ್ಯದ ಜನರಿಗೆ ಅಕ್ಕಿ, ಹಣ ಎರಡನ್ನೂ ಕೊಟ್ಟಿದ್ದೇವೆ ಎಂದರು.

ಕೆಂದ್ರ ಸರ್ಕಾರ ಮೊದಲು ಒಂದು ಕೆಜಿ ಅಕ್ಕಿಗೆ 28 ರೂನಿಗದಿಪಡಿಸಿತ್ತುಜನವರಿಯಿಂದ ಪ್ರತಿ ಕೆಜಿಗೆ 22.50 ರೂ ನಂತೆ ಕೊಡಲು ನಿರ್ಧರಿಸಿದೆದರ ಪರಿಷ್ಕರಣೆಹಿನ್ನೆಲೆಯಲ್ಲಿಮೂರು ತಿಂಗಳು ಹಣ ಹಾಕಿಲ್ಲಒಂದು ವಾರದೊಳಗೆ ಸಕಾಲದಲ್ಲಿ ಹಣ ಹಾಕುತ್ತೇವೆರಾಜ್ಯದ ಜನರಿಗೆ ಈಗಾಗಲೇ ನವೆಂಬರವರೆಗೂ ಹಣ ನೀಡಿದ್ದೇವೆಜನವರಿವರೆಗೆ ಹಣವನ್ನು ಡಿಬಿಟಿ ಮೂಲಕ ಹಾಕುತ್ತೇವೆ ಎಂದು ಭರವಸೆ ನೀಡಿದರು.


Spread the love

LEAVE A REPLY

Please enter your comment!
Please enter your name here