ಹುಷಾರ್, ಇನ್ಮುಂದೆ ವಕೀಲರ ಮೇಲೆ ಹಲ್ಲೆ ಮಾಡಿದವರಿಗೆ ಗರಿಷ್ಠ 3 ವರ್ಷ ಶಿಕ್ಷೆ, 1 ಲಕ್ಷ ದಂಡ

0
Spread the love

ಬೆಳಗಾವಿ:- ಇತ್ತೀಚೆಗೆ ವಕೀಲರ ಮೇಲೆ ಹೆಚ್ಚು ಹಲ್ಲೆ ಆಗುತ್ತಿರುವುದನ್ನು ಮನಗಂಡು ಸುವರ್ಣಸೌಧದಲ್ಲಿ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕವನ್ನು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಹೆಚ್ ಕೆ ಪಾಟೀಲ್ ಮಂಡಿಸಿದ್ದಾರೆ.

Advertisement

ವಕೀಲರ ಮೇಲೆ ಹಲ್ಲೆ ಮಾಡಿದವರಿಗೆ 3 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುವುದು. ವಕೀಲರ ಮೇಲೆ ಹಲ್ಲೆ ತಡೆಯುವ ನಿಟ್ಟಿನಲ್ಲಿ ಈ ವಿಧೇಯಕ ತರಲಾಗಿದೆ.

ಹಲ್ಲೆ ಮಾಡಿದ ವ್ಯಕ್ತಿಗೆ 6 ತಿಂಗಳಿಂದ 3 ವರ್ಷದವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ.ವರೆಗೆ ದಂಡ ವಿಧಿಸುವ ಅವಕಾಶ ಕಲ್ಪಿಸಲಾಗಿದೆ. ಪೊಲೀಸರು ಯಾವೊಬ್ಬ ವಕೀಲರನ್ನು ಬಂಧಿಸಿದರೆ 24 ಗಂಟೆಯೊಳಗಾಗಿ ವಕೀಲರ ಸಂಘಕ್ಕೆ ಮಾಹಿತಿ ನೀಡಬೇಕು. ಬೆದರಿಕೆ, ಕೆಲಸಕ್ಕೆ ಅಡ್ಡಿ, ಕಿರುಕುಳ ನೀಡಿದರೆ ಶಿಕ್ಷೆ ಇದೆ.

ದೇಶ- ವಿದೇಶದಲ್ಲಿ ಮುಕ್ತವಾಗಿ ಪ್ರಯಾಣಿಸಲು ಹಾಗೂ ಕಕ್ಷಿದಾರರೊಂದಿಗೆ ಸಮಾಲೋಚಿಸಲು ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ.

ವಕೀಲರ ಸಂರಕ್ಷಣಾ ಕಾಯ್ದೆಯನ್ನು ಜಾರಿಗೆ ತರುವಂತೆ ಈ ಹಿಂದಿನ ಬಿಜೆಪಿ ಸರ್ಕಾರಕ್ಕೆ ಕರ್ನಾಟಕ ವಕೀಲರ ಸಂಘ ಮನವಿ ಮಾಡಿತ್ತು. ಈ ಸಂಬಂಧ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಪ್ರತಿಭಟನೆಗಳು ನಡೆದಿದ್ದವು.

ಇತ್ತೀಚೆಗೆ ಮೈಸೂರಿನಲ್ಲಿ ನಡೆದಿದ್ದ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ 10ನೇ ರಾಜ್ಯ ಸಮ್ಮೇಳನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ವಕೀಲರ ಸಂರಕ್ಷಣಾ ವಿಧೇಯಕವನ್ನು ಮುಂದಿನ ಅಧಿವೇಶನದಲ್ಲಿ ಜಾರಿಗೆ ತರುವುದಾಗಿ ಭರವಸೆ ನೀಡಿದ್ದರು.

ಅದರಂತೆ ಇದೀಗ ಸಿದ್ದರಾಮಯ್ಯ ಸರ್ಕಾರ ವಕೀಲರ ಸಂರಕ್ಷಣಾ ವಿಧೇಯಕವನ್ನು ಮಂಡನೆ ಮಾಡಿದೆ.


Spread the love

LEAVE A REPLY

Please enter your comment!
Please enter your name here