ವಹಿಸಿರುವ ಜವಾಬ್ದಾರಿಗಳನ್ನು ನಿಭಾಯಿಸಿ

0
Spread the love

ವಿಜಯಸಾಕ್ಷಿ ಸುದ್ದಿ, ರೋಣ: ಎಪ್ರಿಲ್ 14ರಂದು ನಡೆಯಲಿರುವ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನರಾಂ ಜಯಂತಿಯನ್ನು ವಿಜ್ರಂಭಣೆಯಿಂದ ಆಚರಿಸಲಾಗುತ್ತಿದ್ದು, ಎಪ್ರಿಲ್ 14ರಂದು ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಎಲ್ಲಾ ಕಚೇರಿಗಳಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಂ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಬೇಕು ಎಂದು ತಹಸೀಲ್ದಾರ ನಾಗರಾಜ ಕೆ ಸೂಚಿಸಿದರು.

Advertisement

ಮಂಗಳವಾರ ಪಟ್ಟಣದ ತಹಸೀಲ್ದಾರ ಕಾರ್ಯಾಲಯದಲ್ಲಿ ಜರುಗಿದ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಅವರ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲ ಇಲಾಖೆಗಳ ಸಹಾಯ-ಸಹಕಾರ ಅಗತ್ಯವಾಗಿದ್ದು, ಆಯಾ ಇಲಾಖೆಗಳಿಗೆ ವಹಿಸಿರುವ ಜವಾಬ್ದಾರಿಗಳನ್ನು ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ತೊಂದರೆಗಳು ಆಗದಂತೆ ಜಯಂತಿಯನ್ನು ವಿಜ್ರಂಭಣೆಯಿಂದ ಆಚರಿಸುವಲ್ಲಿ ಮುಂದಾಗಿ ಎಂದರು.

ಪಟ್ಟಣದ ಸಿದ್ಧಾರೂಢ ಮಠದಿಂದ ಸೂಡಿ ವೃತ್ತ, ಮುಲ್ಲಾನ ಬಾವಿ ವೃತ್ತ ಮಾರ್ಗವಾಗಿ ಪುರಸಭೆ ಆವರಣದವರೆಗೆ ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಭಾವಚಿತ್ರ ಮೆರವಣಿಗೆ ಮತ್ತು ವಿವಿಧ ಕಲಾ ತಂಡಗಳಿಂದ ವಾದ್ಯಮೇಳ ಮೆರವಣಿಗೆಯುದ್ದಕ್ಕೂ ಮಾಡಲಾಗುವುದು ಎಂದು ಸಮಾಜದ ಮುಖಂಡರು ತಿಳಿಸಿದರು.

ಸಭೆಯಲ್ಲಿ ಪ್ರಕಾಶ ಹೊಸಳ್ಳಿ, ಸೋಮು ನಾಗರಾಜ, ಶರಣಪ್ಪ ದೊಡ್ಡಮನಿ, ಸಂಜಯ್ ದೊಡ್ಡಮನಿ, ಬಸವರಾಜ ತಳವಾರ, ದೇವೆಂದ್ರಪ್ಪ ಕೊಳಪ್ಪನ್ನವರ, ಭೀಮಪ್ಪ ಮಾದರ, ಮಜೂರಪ್ಪ ಮಾದರ, ತಾ.ಪಂ ಇಓ ಚಂದ್ರಶೇಖರ್ ಕಂದಕೂರ, ಪಿ.ಎಸ್.ಐ ಪ್ರಕಾಶ ಬಾಣಕಾರ, ತಾಲೂಕ ಸಮಾಜ ಕಲ್ಯಾಣ ಅಧಿಕಾರಿ ಗೀತಾ ಆಲೂರ, ಪುರಸಭೆ ಅಧ್ಯಕ್ಷೆ ಗೀತಾ ಮಾಡಲಗೇರಿ ಮತ್ತಿತರರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here