ಬೆಂಗಳೂರು:- ನಾಳೆ SM ಕೃಷ್ಣರ ಅಂತ್ಯಕ್ರಿಯೆ ಹಿನ್ನೆಲೆ ಮೆಟ್ರೋ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು.
ಇದೀಗ BMRCL ಇದಕ್ಕೆ ಸ್ಪಷ್ಟನೆ ಕೊಟ್ಟಿದ್ದು, ನಮ್ಮ ಮೆಟ್ರೋ’ ಸೇವೆಯಲ್ಲಿ ನಾಳೆ ಯಾವುದೇ ವ್ಯತ್ಯಯ ಇರುವುದಿಲ್ಲ. ವೇಳಾಪಟ್ಟಿಯಂತೆ ಮೆಟ್ರೋ ರೈಲುಗಳು ಸಂಚರಿಸಲಿದೆ ಎಂದು BMRCL ಸ್ಪಷ್ಟನೆ ಕೊಟ್ಟಿದೆ.
ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ನಿಧನದ ಹಿನ್ನೆಲೆ ಬುಧವಾರ ರಾಜ್ಯ ಸರ್ಕಾರ ಸಾರ್ವಜನಿಕ ರಜೆ ಘೋಷಣೆ ಮಾಡಿದೆ. ಶಾಲಾ, ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ‘ನಮ್ಮ ಮೆಟ್ರೋ’ ಕೂಡ ಕಾರ್ಯ ನಿರ್ವಹಿಸುತ್ತಿಲ್ಲ ಎಂಬ ಸುಳ್ಳು ವದಂತಿ ಹರಡಿದಾಡಿತ್ತು. ಇದಕ್ಕೆ ಬಿಎಂಆರ್‌ಸಿಎಲ್ ಸ್ಪಷ್ಟನೆ ನೀಡಿದೆ.
ಶಾಲಾ-ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳು ಬುಧವಾರ ಕಾರ್ಯನಿರ್ವಹಿಸುತ್ತಿಲ್ಲವಾದರೂ ‘ನಮ್ಮ ಮೆಟ್ರೋ’ ಎಂದಿನಂತೆ ಸೇವೆ ಸಲ್ಲಿಸಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿ ಎಂದು ತನ್ನ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.