ವಿವಿಧೆಡೆ ಜಿ.ಪಂ ಸಿಇಓ ಭೇಟಿ

0
Spread the love

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಅವರು ಶಿರಹಟ್ಟಿ ತಾಲೂಕಿನಲ್ಲಿ ನಬಾರ್ಡ್ ಯೋನೆಯಡಿ ಪ್ರಗತಿಯಲ್ಲಿರುವ 100 ಹಾಸಿಗೆಯ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ಇದೇ ಸಂದರ್ಭದಲ್ಲಿ ಶಿರಹಟ್ಟಿ ವ್ಯಾಪ್ತಿಯ ಸಿ.ಸಿ.ಎನ್. ಸರಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಮಕ್ಕಳ ದಾಖಲಾತಿ, ಬೋಧನಾ ಗುಣಮಟ್ಟ, ಶಾಲಾ ಶೌಚಾಲಯ, ಕುಡಿಯುವ ನೀರಿನ ಸೌಲಭ್ಯ, ಅಡುಗೆ ಕೋಣೆಗಳಿಗೆ ಭೇಟಿ ನೀಡಿ ಸ್ವಚ್ಛತೆಯನ್ನು ಅವಲೋಕಿಸಿದರು.

ನಂತರ ತಾಲೂಕಿನ ಬೆಳ್ಳಟ್ಟಿ ಗ್ರಾ.ಪಂ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಬಾಣಂತಿಯರ ದಾಖಲಾತಿ, ಹೊರ ರೋಗಿಗಳ ವಿಭಾಗ, ಲೇಬರ್ ವಿಭಾಗ, ಔಷಧಿ ವಿಭಾಗಗಳನ್ನು ಪರಿಶೀಲಿಸಿದರು. ಗ್ರಾಮದ ಸರಕಾರಿ ಪ್ರಾಢಶಾಲೆಗೆ ಭೇಟಿ ನೀಡಿ ಹಾಜರಾತಿ, ಬಿಸಿ ಊಟದ ಕೊಠಡಿ, ಭೋದನಾ ಗುಣಮಟ್ಟ, ಸಿಬ್ಬಂದಿಗಳ ಹಾಜರಾತಿ ಪರಿಶೀಲನೆ ಕೈಗೊಂಡರು.

ಇದೇ ವೇಳೆ ಅಡುಗೆ ಸಿಬ್ಬಂದಿಗಳೊಂದಿಗೆ ಮಾತನಾಡಿ, ಬಿಸಿಯೂಟಕ್ಕೆ ಬಳಸುವ ತರಕಾರಿ, ಮಕ್ಕಳಿಗೆ ವಿತರಿಸುವ ಮೊಟ್ಟೆ, ಬಾಳೆಹಣ್ಣಿನ ಬಗ್ಗೆ ಮಾಹಿತಿ ಪಡೆದರು. ಶಾಲಾ ಮಕ್ಕಳಿಗೆ ವಿತರಿಸಲಾಗುವ ಊಟದ ಕುರಿತು ಅಕ್ಷರ ದಾಸೋಹದ ಕೊಠಡಿಗಳಿಗೆ ಭೇಟಿ ನೀಡಿ ದವಸ ಧಾನ್ಯ, ತರಕಾರಿಗಳನ್ನು ಪರೀಕ್ಷಿಸಿದರು.

ಈ ಸಂದರ್ಭದಲ್ಲಿ ತಾ.ಪಂ ಇಓ ಆರ್.ವಿ. ದೊಡ್ಡಮನಿ, ಬಿಇಓ ಎಚ್.ಎನ್. ನಾಯಕ, ಆರ್‌ಎಫ್‌ಓ ರಾಮಪ್ಪ ಪೂಜಾರ, ಬೆಳ್ಳಟ್ಟಿ ಗ್ರಾ.ಪಂ ಅಧ್ಯಕ್ಷ ರಮೇಶ ನಿರ್ವಾಣಶೆಟ್ಟರ, ಸದಸ್ಯ ಶಿವನಗೌಡ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here