HomeGadag Newsಜಿ.ಪಂ ಸಿಇಓ ಭರತ್ ಎಸ್ ಅನಿರೀಕ್ಷಿತ ಭೇಟಿ

ಜಿ.ಪಂ ಸಿಇಓ ಭರತ್ ಎಸ್ ಅನಿರೀಕ್ಷಿತ ಭೇಟಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ಜಿ.ಪಂ ಸಿಇಓ ಭರತ್ ಎಸ್ ಮಂಗಳವಾರ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು.

ಪಟ್ಟಣದ ಅಗಸ್ತ್ಯತೀರ್ಥ ರಸ್ತೆಯಲ್ಲಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ಭೇಟಿ ನೀಡಿ ಅಡುಗೆ ಕೋಣೆ, ಶೌಚಾಲಯಗಳ ವ್ಯವಸ್ಥೆಯನ್ನು ಪರಿಶೀಲಿಸಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು. ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಲಭ್ಯವಾಗುವ ಸೌಲಭ್ಯಗಳನ್ನು ನಿಯಮಾನುಸಾರ ವಿತರಣೆ ಮಾಡಬೇಕು ಎಂದು ಹಾಸ್ಟೆಲ್ ಸಿಬ್ಬಂದಿಗಳಿಗೆ ಸೂಚಿಸಿದರು. ವಿದ್ಯಾರ್ಥಿನಿಲಯದ ಆವರಣದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು.

ಉತ್ತಮವಾದ, ಶುಚಿರುಚಿಯಾದ ಆಹಾರ ಒದಗಿಸಬೇಕು ಎಂದು ಸೂಚಿಸಿದರು.

ನಂತರ ಪಟ್ಟಣದ ಸರಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆಸ್ಪತ್ರೆಯ ವಾರ್ಡ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಂದ ಚಿಕಿತ್ಸಾ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದರು. ರೋಗಿಗಳಿಗೆ ವಿಳಂಬ ಮಾಡದೇ ಚಿಕಿತ್ಸೆ ನೀಡುವಂತೆ ಸಿಬ್ಬಂದಿಗಳಿಗೆ ಸೂಚಿಸಿ, ಆಸ್ಪತ್ರೆಯ ಶೌಚಾಲಯ, ಔಷಧ ವಿತರಣಾ ಕೇಂದ್ರ, ದಾಸ್ತಾನು ಕೊಠಡಿ, ಡಯಾಲಿಸಿಸ್ ವಾರ್ಡ್, ಹೊರ ರೋಗಿಗಳ ಚಿಕಿತ್ಸಾ ಕೊಠಡಿಗಳನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ, ತಾಲೂಕು ಮಟ್ಟದ ವಿವಿಧ ಅಧಿಕಾರಿಗಳು, ಆಸ್ಪತ್ರೆಯ ಡಾ. ಗುರುರಾಜ ಕುಡಗಿ, ಡಾ. ಪ್ರವೀಣ ಸಜ್ಜನರ ಹಾಗೂ ಹಾಸ್ಟೆಲ್ ಸಿಬ್ಬಂದಿ ಇದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img