HomeGadag Newsಕಾಮಗಾರಿ ಪರಿಶೀಲಿಸಿದ ಜಿ.ಪಂ ಸಿಇಓ

ಕಾಮಗಾರಿ ಪರಿಶೀಲಿಸಿದ ಜಿ.ಪಂ ಸಿಇಓ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಭರತ್ ಎಸ್. ಅವರು ಗದಗ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ನರೇಗಾ ಹಾಗೂ ಪಂಚಾಯತ್ ರಾಜ್ ಇಲಾಖೆಯಡಿ ಅನುಷ್ಠಾನವಾದ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ತಾಲೂಕಿನ ನಾಗವಿ, ಬೆಳಧಡಿ ಹಾಗೂ ಹರ್ತಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಿರ್ಮಿಸಲಾದ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿ, ಬದು ನಿರ್ವಹಣೆ ಕಾಮಗಾರಿ, ಘನತ್ಯಾಜ್ಯ ವಿಲೇವಾರಿ ಘಟಕ ಸೇರಿದಂತೆ ವಿವಿಧ ಕಾಮಗಾರಿಗಳನ್ನು ವೀಕ್ಷಣೆ ಮಾಡಿ ಕಾಮಗಾರಿ ಕಡತಗಳು ಹಾಗೂ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಅಳತೆಯ ಪ್ರಮಾಣವನ್ನು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಗದಗ ತಾ.ಪಂ ಸಹಾಯಕ ನಿರ್ದೇಶಕ (ಗ್ರಾ ಉ), ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ನರೇಗಾ ಸಿಬ್ಬಂದಿಗಳು ಹಾಗೂ ಗ್ರಾ.ಪಂ ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img