ವಿಜಯಸಾಕ್ಷಿ ಸುದ್ದಿ, ಗದಗ: ಹದಿನೈದು ವರ್ಷ ಪ್ರಧಾನಿಯಾಗಿ, ದೇಶದ ಸರ್ವಾಂಗೀಣ ಅಭಿವೃದ್ಧಿಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದ ದಿ. ಇಂದಿರಾ ಗಾಂಧಿ ಅವರ 41ನೇ ಪುಣ್ಯಸ್ಮರಣೆ ಕಾರ್ಯಕ್ರಮ ನಗರದ ದಿ. ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅ. 31ರಂದು ಬೆಳಿಗ್ಗೆ 10.20ಕ್ಕೆ ಜರುಗಲಿದೆ ಎಂದು ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಕರ್ನಾಟಕ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ, ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ, ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಡಿ.ಆರ್. ಪಾಟೀಲ ಭಾಗವಹಿಸುವರು.
ಕಾಂಗ್ರೆಸ್ ಪಕ್ಷದ ಮಾಜಿ ಹಾಗೂ ಹಾಲಿ ಶಾಸಕರು, ಪಕ್ಷದ ಜಿಲ್ಲಾ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ಎಪಿಎಂಸಿ, ಪಿ.ಎಲ್.ಡಿ. ಬ್ಯಾಂಕ್‌ನ ಅಧ್ಯಕ್ಷರು ಹಾಗೂ ಸದಸ್ಯರು, ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆ ಅಧ್ಯಕ್ಷರು ಹಾಗೂ ಸದಸ್ಯರು, ಕಾಂಗ್ರೆಸ್ ಪ್ರಚಾರ ಸಮಿತಿ, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎಸ್‌ಸಿ/ಎಸ್‌ಟಿ, ಅಲ್ಪಸಂಖ್ಯಾತರ, ವಿದ್ಯಾರ್ಥಿ ಕಾಂಗ್ರೆಸ್, ಕಾಂಗ್ರೆಸ್ ಸೇವಾದಳ, ಹಿಂದುಳಿದ ವರ್ಗ, ಸಾಮಾಜಿಕ ಜಾಲತಾಣ, ರಾಜೀವಗಾಂಧಿ ಪಂಚಾಯತ್ ಸಂಘಟನೆ, ಮಾಜಿ ಸೈನಿಕರ ವಿಭಾಗ, ಮೀನುಗಾರ ವಿಭಾಗ, ಕಾರ್ಮಿಕರ ವಿಭಾಗ, ಐಎನ್‌ಟಿಯುಸಿ, ಕಾನೂನು ಮತ್ತು ಮಾನವ ಹಕ್ಕು ವಿಭಾಗ, ಕಿಸಾನ್ ಮತ್ತು ಖೆತ್ ಮಜ್ದೂರ್ ವಿಭಾಗ, ಮಾಜಿ ಸೈನಿಕರ ವಿಭಾಗ, ವೈದ್ಯರ ವಿಭಾಗ, ವೃತ್ತಿಪರ ವಿಭಾಗ, ಪದವಿಧರ ಹಾಗೂ ಶಿಕ್ಷಕರ ವಿಭಾಗ, ನೀತಿ ಮತ್ತು ಸಂಶೋಧನೆ ತರಬೇತಿ ವಿಭಾಗ, ವಿಕಲಚೇತನರ ವಿಭಾಗ, ಲೀಗಲ್ ರೀಫಾರ್ಮ್ಸ್ ವಿಭಾಗ, ಐಟಿ ಮತ್ತು ಡಾಟಾ ವಿಭಾಗ, ಮಾಧ್ಯಮ ಮತ್ತು ಸಂಪರ್ಕ ವಿಭಾಗಗಳ ಅಧ್ಯಕ್ಷರು ಹಾಗೂ ಸದಸ್ಯರು, ಪಕ್ಷದ ಅಭಿಮಾನಿಗಳು ಪಾಲ್ಗೊಳ್ಳಬೇಕೆಂದು ಅಶೋಕ ಮಂದಾಲಿ ವಿನಂತಿಸಿದ್ದಾರೆ.
ಮಾಜಿ ಶಾಸಕರಾದ ಬಿ.ಆರ್. ಯಾವಗಲ್, ಜಿ.ಎಸ್. ಗಡ್ಡದೇವರಮಠ, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ಮುಖಂಡರಾದ ಆನಂದಸ್ವಾಮಿ ಗಡ್ಡದೇವರಮಠ, ಸುಜಾತಾ ದೊಡ್ಡಮನಿ, ಗದಗ-ಬೆಟಗೇರಿ ಶಹರ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಬಿ.ಬಿ. ಅಸೂಟಿ, ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಕೃಷ್ಣಗೌಡ ಎಚ್.ಪಾಟೀಲ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.



