ಗದಗ:- ಮಿಕ್ಸರ್ ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜರುಗಿದೆ.
ಗದಗ ತಾಲೂಕಿನ ನಾಗಾವಿ ಬಳಿ ಇರುವ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾನಿಲಯ ಗೇಟ್ ಬಳಿ ಘಟನೆ ಜರುಗಿದ್ದು, ಮೃತರನ್ನು ಮನೋಜ್ ನಾಗೇಶ್ ಕಮತರ (19), ಆನಂದ ಸಂಗಪ್ಪ ವಾರದ (18) ಎಂದು ಗುರುತಿಸಲಾಗಿದೆ. ಇವರು ಗದಗ ತಾಲೂಕಿನ ನಾಗಾವಿ ಗ್ರಾಮದ ನಿವಾಸಿಗಳು.
ಅಪಘಾತದ ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.



