ಗದಗ:- ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಕೇರಿ ಹಾಗೂ ಹಳ್ಳಿಗುಡಿ ಗ್ರಾಮದಲ್ಲಿ ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಜರುಗಿದೆ.
Advertisement
ರಾಂಗ್ ರೂಟ್ ನಲ್ಲಿ ಬಂದು ಬೈಕ್ ಗೆ ಬೈಕ್ ಡಿಕ್ಕಿ ಹೊಡೆದ ಹಿನ್ನೆಲೆ ಅವಘಡ ಸಂಭವಿಸಿದೆ. ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ನಿವಾಸಿ ವಸಂತ ಚೆನ್ನಳ್ಳಿ (38) ಮೃತ ದುರ್ದೈವಿ ಎನ್ನಲಾಗಿದೆ.
ಕೂಡಲೇ ಮುಂಡರಗಿ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.