ಗದಗ:- ಅಕ್ರಮ ಅಕ್ಕಿ ದಂಧೆಕೋರರ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ದಾಳಿ ಮಾಡಿರುವ ಘಟನೆ ಗದಗದ ಬೆಟಗೇರಿಯ ಮಂಜುನಾಥ ನಗರದಲ್ಲಿ ಜರುಗಿದೆ.
ಬೆಟಗೇರಿಯ ಪೊಲೀಸರು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಅಕ್ರಮ ಅಕ್ಕಿ ದಂಧೆಯಲ್ಲಿ ಪಾಲ್ಗೊಂಡಿದ್ದ ಆರೋಪಿ ಅಹ್ಮದ್ ಯಲಿಗಾರ ನನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 3.6 ಕ್ವಿಂಟಲ್ ಅಕ್ಕಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಬೆಟಗೇರಿ ಪೊಲೀಸ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಇನ್ನೂ ಗದಗ ಜಿಲ್ಲೆಯಲ್ಲಿ ಸಾಕಷ್ಟು ರೀತಿಯಲ್ಲಿ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಬಡವರಿಗೆ ವಿತರಣೆ ಆಗಬೇಕಾಗಿರುವ ಪಡಿತರ ಅಕ್ಕಿಯನ್ನ ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಕೋಟ್ಯಾಂತರ ರೂ. ಕೊಳ್ಳೆ ಹೊಡೆಯುವ ಕೆಲಸ ಇಂದಿಗೂ ನಿಂತಿಲ್ಲ. ಇದಕ್ಕೆ ಕಡಿವಾಣ ಹಾಕುವ ಕೆಲಸದಲ್ಲಿ ಅಧಿಕಾರಿಗಳು ಮುಂದಾಗಬೇಕಿದೆ.