ಗದಗ: ಆಸ್ಪತ್ರೆಗೆ ಹೋಗುತ್ತಿದ್ದಾಗ ಗರ್ಭಿಣಿಯೊಬ್ಬರು ಆಂಬ್ಯುಲೆನ್ಸ್‌ನಲ್ಲಿಯೇ ಮಗುವಿಗೆ ಜನ್ಮ ನೀಡಿದ ಘಟನೆ ಗದಗ ತಾಲೂಕಿನಲ್ಲಿ ನಡೆದಿದೆ.
Advertisement
ಹೆರಿಗೆ ನೋವಿನಿಂದ ಬಳಲುತ್ತಿದ್ದ ಸಾವಿತ್ರಿ ಲಮಾಣಿ ಅವರನ್ನು108 ಆಂಬ್ಯುಲೆನ್ಸ್‌ನಲ್ಲಿ ಕರೆದೊಯ್ಯಲಾಗುತ್ತಿತ್ತು. ಮಾರ್ಗ ಮಧ್ಯೆಯೇ ಹೆರಿಗೆ ನೋವು ಜಾಸ್ತಿಯಾಯಿತು.
ಹೀಗಾಗಿ ಆಂಬ್ಯುಲೆನ್ಸ್ ನಲ್ಲೇ ಸುರಕ್ಷಿತವಾಗಿ ಹೆರಿಗೆ ಮಾಡಿಸಲಾಗಿದ್ದು, ಸಾವಿತ್ರಿ ಲಮಾಣಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. 108 ಸಿಬ್ಬಂದಿ ರವಿ ಬಡಿಗೇರ ಹಾಗೂ ಮಹೇಶ ರಾಮಣ್ಣವರ ಅವರಿಗೆ ಸಾರ್ವಕನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಸದ್ಯ ತಾಯಿ ಮತ್ತು ಮಗುವಿನ ಸ್ಥಿತಿ ಆರೋಗ್ಯವಾಗಿದ್ದು, ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.