ಗದಗ:- ಟ್ರ್ಯಾಕ್ಟರ್ ಪಲ್ಟಿಯಾಗಿ ಕರ್ತವ್ಯನಿರತ ಪೊಲೀಸ್ ಪೇದೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಮಲ್ಲಸಮುದ್ರ ಬಳಿಯ ಡಿಎಆರ್ ಕಚೇರಿ ಬಳಿ ಭಾನುವಾರ ಸಂಜೆ 6 ಗಂಟೆ ಸುಮಾರಿನಲ್ಲಿ ಜರುಗಿದೆ.
Advertisement
ಮಹೇಶ ಕರಿಯಣ್ಣವರ(50) ಸ್ಥಳದಲ್ಲೇ ಸಾವನ್ನಪ್ಪಿದ ಪೊಲೀಸ್ ಪೇದೆ. ಇವರು ಪತ್ನಿ ಹಾಗೂ ಓರ್ವ ಮಗಳನ್ನು ಅಗಲಿದ್ದಾರೆ. ಗದಗ ನಗರದ ಹೊರವಲಯದ ಮಲ್ಲಸಮುದ್ರ ಸಮೀಪದ ಗುಡ್ಡದ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ ಹೊಡೆದಿದೆ. ಪರಿಣಾಮ ಟ್ರ್ಯಾಕ್ಟರ್ ಚಲಾಯಿಸಲು ಹೋದ ಮಹೇಶ್ ಕರಿಯಣ್ಣವರ ಮೇಲೆ ಟ್ರ್ಯಾಕ್ಟರ್ ಇಂಜಿನ್ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ.
ಮೂಲತಃ ಗದಗ ಜಿಲ್ಲೆಯ ರೋಣ ತಾಲೂಕಿನ ಮಲ್ಲಾಪೂರ ಗ್ರಾಮದ ನಿವಾಸಿಯಾಗಿರುವ ಮೃತ ಪೇದೆ ಮಹೇಶ್, 1999 ರಿಂದ ಗದಗ ಡಿ.ಎ.ಆರ್ ಸೇವೆ ಮಾಡ್ತಿದ್ದರು ಎಂದು ತಿಳಿದು ಬಂದಿದೆ. ಘಟನೆ ಬಳಿಕ ಗದಗ ಗ್ರಾಮಿಣ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.