ವಿಜಯಸಾಕ್ಷಿ ಸುದ್ದಿ, ಗದಗ : ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಸಹಕಾರಿಯಾಗಲಿದೆ. ವಿದ್ಯಾರ್ಥಿಗಳು ಸತತ ಪ್ರಯತ್ನ ಮಾಡಿ ಸಕ್ರಿಯವಾಗಿ ಕ್ರೀಡೆಗಳಲ್ಲಿ ಭಾಗವಹಿಸಿದಾಗ ಮಾತ್ರ ದೈಹಿಕ, ಮಾನಸಿಕವಾಗಿ ಸದೃಢವಾಗಲು ಸಾಧ್ಯ ಎಂದು ಶಾಲಾ ಶಿಕ್ಷಣ ಇಲಾಖೆ, ಗದಗ ಜಿಲ್ಲಾ ಉಪ ನಿರ್ದೇಶಕರಾದ ಜಿ.ಎಲ್. ಬಾರಾಟಕ್ಕೆ ಹೇಳಿದರು.
ಅವರು ಶುಕ್ರವಾರ ಗದಗ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಗದಗ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಶಹರ ವಲಯ ಗದಗ ಹಾಗೂ ಗದಗ ಶಹರ ವಲಯದ ತಾಲೂಕಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 2024-25ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಗದಗ ತಾಲೂಕು ಮಟ್ಟದ ಕ್ರೀಡಾಕೂಟದ ಕ್ರೀಡಾ ಧ್ವಜಾರೋಹಣ ಮತ್ತು ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಯಾರ ದೇಹ ಸದೃಢವಾಗಿರುತ್ತದೆಯೋ, ಅವರ ಮನಸ್ಸು ಕೂಡ ಸದೃಢವಾಗಿರುತ್ತದೆ. ಹೀಗಿದ್ದಾಗ ಮಾತ್ರ ಶೈಕ್ಷಣಿಕವಾಗಿ ಮುಂದೆ ಬರಲು ಸಾಧ್ಯ. ನಿರ್ಣಾಯಕರು ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪಾರದರ್ಶಕವಾಗಿ ನಿರ್ಣಯ ನೀಡಬೇಕು. ಕ್ರೀಡಾಪಟುಗಳು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿ ನಿಮ್ಮ ಬದುಕನ್ನು ರೂಪಿಸಿಕೊಳ್ಳಿ ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗದಗ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ನಡುವಿನಮನಿ, ಗದಗ ತಾಲೂಕು ಅಕ್ಷರ ದಾಸೋಹ ಅಧಿಕಾರಿ ಶಂಕರ ಹಡಗಲಿ, ಗದಗ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಅಧಿಕಾರಿ ಕೊಟ್ರೇಶ ವಿಭೂತಿ, ಗದಗ ಶಹರ ವಲಯದ ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಪಿ. ಪ್ರಭಯ್ಯನಮಠ, ರಾಷ್ಟçಪ್ರಶಸ್ತಿ ವಿಜೇತ ಶಿಕ್ಷಕ ಎಸ್.ಎನ್. ಬಳ್ಳಾರಿ, ಗದಗ ಗ್ರಾಮೀಣ ದೈಹಿಕ ಶಿಕ್ಷಣಾಧಿಕಾರಿ ಟಿ.ಎಸ್. ಪವಾರ, ಎಂ.ಎಸ್. ಕುಚಬಾಳ, ಶರಣಪ್ಪ ನಾಗರಳ್ಳಿ, ಎಸ್.ಎಂ. ಪೂಜಾರ, ಎಸ್.ಕೆ. ಮಂಗಳಗುಡ್ಡ, ರವಿ ಕೋಟಿ, ಡಿ.ಬಿ. ಮೆಣಸಿನಕಾಯಿ, ಎಸ್.ಎಂ. ಉಮ್ಮಣ್ಣವರ, ಎಸ್.ಎಂ. ಮಾಶಾಳ, ಚಂದ್ರಕಾಂತ ಕಬಾಡಿ ಮುತಾದವರು ಉಪಸ್ಥಿತರಿದ್ದರು.
ಗದಗ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಮುಳಗುಂದ ಪ್ರತಿಜ್ಞಾವಿಧಿ ಬೋಧಿಸಿದರು. ಎಸ್.ಎಂ. ಉಮ್ಮಣ್ಣವರ ನಿರೂಪಿಸಿದರು. ಗದಗ ಶಹರ ದೈಹಿಕ ಶಿಕ್ಷಣ ಅಧಿಕಾರಿ ಜೆ.ಬಿ. ಅಣ್ಣಿಗೇರಿ ಸ್ವಾಗತಿಸಿ ವಂದಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಕ್ರೀಡಾ ಜ್ಯೋತಿ ಸ್ವೀಕರಿಸಿದ ಗದಗ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರಡಿ ಮಾತನಾಡಿ, ಒಲಿಂಪಿಕ್ ಹಾಗೂ ಪ್ಯಾರಾ ಒಲಿಂಪಿಕ್‌ಗಳಲ್ಲಿ ಭಾಗವಹಿಸಿದ ಕ್ರೀಡಾಪಟುಗಳ ಸಾಧನೆಗಳನ್ನು ವಿದ್ಯಾರ್ಥಿಗಳು ಪ್ರೇರಣೆಯಾಗಿ ಪಡೆದು ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ವಿಜೇತರಾಗಿ ಗದಗ ಜಿಲ್ಲೆಗೆ ಕೀರ್ತಿ ತರುವಂತೆ ಕರೆ ನೀಡಿದರಲ್ಲದೆ, ಹಲವಾರು ಇಲಾಖೆಗಳಲ್ಲಿ ಕ್ರೀಡಾ ಮೀಸಲಾತಿಯಲ್ಲಿ ಉದ್ಯೋಗ ಅವಕಾಶಗಳಿದ್ದು, ಕ್ರೀಡಾಪಟುಗಳು ಇದರ ಉಪಯೋಗ ಪಡೆಯಬೇಕು ಎಂದರು.