ಗದಗ:- ಇಂದು ಬೆಳ್ಳಂ ಬೆಳಗ್ಗೆ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಶಾಂತಿ ಚಿತ್ರಮಂದಿರ ಸುಟ್ಟು ಭಸ್ಮವಾಗಿರುವ ಘಟನೆ ಗದಗ ನಗರದಲ್ಲಿ ಜರುಗಿದೆ.
ಬೆಂಕಿ ಕೆನ್ನಾಲಿಗೆಗೆ ಚಿತ್ರಮಂದಿರದ ಎಲ್ಲ ಕಟ್ಟಡ, ಕುರ್ಚಿ, ಫ್ಯಾನ್, ಸ್ಪೀಕರ್, ಪಿಓಪಿ ಸೇರಿದಂತೆ ಎಲ್ಲಾ ವಸ್ತುಗಳು ಸುಟ್ಟು ಹೋಗಿವೆ.

ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಬೆಟಗೇರಿ ಬಡಾವಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.
ಬೆಂಕಿ ಅವಘಡಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಪೊಲೀಸರ ತನಿಖೆಯ ನಂತರವೇ ಸತ್ಯಾಸತ್ಯತೆ ತಿಳಿದು ಬರಬೇಕಿದೆ. ಬೆಟಗೇರಿ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.



