ವಿಜಯಸಾಕ್ಷಿ ಸುದ್ದಿ, ಗದಗ : ಕಳೆದ 24 ವರ್ಷಗಳಿಂದ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ `ಗದಗ ಉತ್ಸವ’ ಆಯೋಜಿಸುತ್ತ ಬಂದಿದೆ. ಈ ವರ್ಷ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಗ್ರಾಮೀಣ ಮತ್ತು ಸಣ್ಣ ಉದ್ಯಮ ವಿಭಾಗ, ಜಿಲ್ಲಾ ಪಂಚಾಯತ್ ಆಶ್ರಯದಲ್ಲಿ ಕೈಗಾರಿಕಾ ವಸ್ತುಪ್ರದರ್ಶನ ಹಾಗೂ ಮಾರಾಟ ಮೇಳ `ಗದಗ ಉತ್ಸವ-2024′ ಇದೇ ಆಗಸ್ಟ್ 30ರಿಂದ ಸೆ. 3ರವರೆಗೆ ತೋಂಟದ ಸಿದ್ಧಲಿಂಗೇಶ್ವರ ಕಲ್ಯಾಣ ಕೇಂದ್ರದಲ್ಲಿ ನಡೆಯಲಿದೆ ಎಂದು ಉತ್ಸವ ಸಮಿತಿ ಚೇರಮನ್ ಚಂದ್ರು ಬಾಳಿಹಳ್ಳಿಮಠ ಹೇಳಿದರು.
ಬುಧವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗದಗ ಉತ್ಸವ ಸಂದರ್ಭದಲ್ಲಿ ಶ್ರೇಷ್ಠ ವರ್ತಕ, ಶ್ರೇಷ್ಠ ಉದ್ಯಮಿ ಪ್ರಶಸ್ತಿ ಪ್ರದಾನ, ಮಹಿಳೆಯರಿಗಾಗಿ ವಿಶೇಷ ಕಾರ್ಯಕ್ರಮ, ಸಂವಾದ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.
ಆ. 30ರಂದು ಸಂಜೆ 4.30ಕ್ಕೆ ಕಾನೂನು, ಪ್ರವಾಸೋದ್ಯಮ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಜ.ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ಬಸವರಾಜ ಬೊಮ್ಮಾಯಿ, ಪಿ.ಸಿ. ಗದ್ದಿಗೌಡರ, ವಿ.ಪ ಸದಸ್ಯರಾದ ಪ್ರದೀಪ ಶೆಟ್ಟರ್, ಸಲೀಂ ಅಹ್ಮದ್, ಎಸ್.ವಿ. ಸಂಕನೂರ, ಶಾಸಕರಾದ ಸಿ.ಸಿ. ಪಾಟೀಲ, ಜಿ.ಎಸ್. ಪಾಟೀಲ, ಡಾ. ಚಂದ್ರು ಲಮಾಣಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಆಯುಕ್ತೆ ಕೃಷ್ಣ ಗುಂಜನ್, ಕಾರ್ಯಕರ್ತೆ ಸಿ. ಶಿಖಾ, ಸಿ.ಎಸ್. ಯೋಗೇಶ್ ಪಾಲ್ಗೊಳ್ಳಲಿದ್ದಾರೆ ಎಂದರು.
ಸೆಪ್ಟೆಂಬರ್ 1ರಂದು ಶ್ರೇಷ್ಠ ವರ್ತಕ, ಶ್ರೇಷ್ಠ ಉದ್ಯಮಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಸಾನ್ನಿಧ್ಯವನ್ನು ಅನ್ನದಾನೇಶ್ವರ ಸಂಸ್ಥಾನ ಮಠದ ಮುಪ್ಪಿನ ಬಸವಲಿಂಗ ಸ್ವಾಮಿಜಿಗಳು ವಹಿಸಿಕೊಳ್ಳಲಿದ್ದು, ಮುಖ್ಯ ಅತಿಥಿಗಳಾಗಿ ಜಯಂತ ಅಶೋಕ ಹುಂಬರವಾಡಿ, ರಮೇಶಚಂದ್ರ ಲಹೋಟಿ, ಎಸ್.ಪಿ. ಸಂಶಿಮಠ, ಶಂಕ್ರಣ್ಣ ಮುನವಳ್ಳಿ, ರಘು ನಾಯಕ ಆಗಮಿಸಲಿದ್ದು, ಜೀವಮಾನ ಸಾಧನೆ ಪ್ರಶಸ್ತಿಯನ್ನು ಮಲ್ಲಿಕಾರ್ಜುನ ಸುರಕೋಡ, ಶರಣಪ್ಪ ಕುರಡಗಿ ಅವರಿಗೆ ಪ್ರದಾನ ಮಾಡಲಾಗುವುದು. 6 ಜನರಿಗೆ ಶ್ರೇಷ್ಠ ವರ್ತಕ, ಶ್ರೇಷ್ಠ ಉದ್ಯಮಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಶೋಕ ಪಾಟೀಲ್, ಉಮೇಶ್ ನಾಲ್ವಾಡ, ಈಶ್ವರಪ್ಪ ಮುನವಳ್ಳಿ, ತಾತನಗೌಡ ಪಾಟೀಲ್, ಪ್ರಕಾಶ್ ಉಗಲಾಟದ, ಅಶೋಕ ಪಾಟೀಲ್, ಉಮೇಶ್ ಹುಬ್ಬಳ್ಳಿ, ಮಂಜುನಾಥ ವೀರಲಿಂಗಮಠ, ವಿಜಯಕುಮಾರ ಹಿಲೇಮಠ, ಶಿವಯ್ಪಜ್ಜ ನಲ್ವತ್ವಾದಮಠ, ದಾನಯ್ಯ ಗಣಾಚಾರಿ ಮುಂತಾದವರು ಉಪಸ್ಥಿತರಿದ್ದರು.
ಆ. 31ರಂದು ಕೈಗಾರಿಕಾ ನೀತಿ ಕುರಿತು ಶಿವಪುತ್ರಪ್ಪ ಹರಿಜನ ಅವರಿಂದ ವಿಚಾರ ಸಂಕಿರಣ, ಮಹಿಳಾ ಘಟಕದಿಂದ ಅಡುಗೆ ಸ್ಪರ್ಧೆ, ರಕ್ತದಾನ ಶಿಬಿರ, ಸಂವಾದ, ಆ. 2ರಂದು ರಫ್ತು ಕುರಿತು ಪಿ.ಎಸ್. ಮಲ್ಲಿಕಾರ್ಜುನ ಅವರಿಂದ ವಿಚಾರ ಸಂಕಿರಣ ನಡೆಯಲಿದೆ ಎಂದು ಚಂದ್ರು ಬಾಳಿಹಳ್ಳಿಮಠ ಮಾಹಿತಿ ನೀಡಿದರು.