ಜಿಲ್ಲಾಧಿಕಾರಿಗಳಿಂದ ಗದುಗಿಗೆ ಹೆಮ್ಮೆ

0
sanmana
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲಾಡಳಿತದ ಹೊಣೆ ಹೊತ್ತಿರುವ ಜಿಲ್ಲಾಧಿಕಾರಿ ಎಮ್.ಎಲ್. ವೈಶಾಲಿ ಹಾಗೂ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಮುದಕಮ್ಮನವರ ಅತ್ಯುತ್ತಮ ಸೇವೆ ಸಲ್ಲಿಸುವ ಮೂಲಕ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಈರ್ವರ ಸೇವೆ ಗುರುತಿಸಿ ಸಭಾಪತಿ ಬಸವರಾಜ ಹೊರಟ್ಟಿಯವರ ನೇತೃತ್ವದ ಅವ್ವ ಸೇವಾ ಟ್ರಸ್ಟ್ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

Advertisement

ಸಭಾಪತಿ ಬಸವರಾಜ ಹೊರಟ್ಟಿ ದಂಪತಿಗಳು ದತ್ತು ಪಡೆದ ಸಿದ್ಧಲಿಂಗ ನಗರದ ಸರಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಶ್ರೀ ಮಹಾಸರಸ್ವತಿ ಪೂಜಾ ಸಮಾರಂಭ ಹಾಗೂ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಲು ಆಗಮಿಸಿದ ಸಂದರ್ಭದಲ್ಲಿ ಅವ್ವ ಸೇವಾ ಟ್ರಸ್ಟ್ ಸಂಚಾಲಕ ಡಾ.ಬಸವರಾಜ ಧಾರವಾಡ ಸನ್ಮಾನಿಸಿ ಮಾತನಾಡಿ, ಎಮ್.ಎಲ್. ವೈಶಾಲಿಯವರು ಜಿಲ್ಲಾಧಿಕಾರಿಗಳಾಗಿ ಹೊಣೆ ಹೊತ್ತಮೇಲೆ ಕಳೆದ ವಿಧಾನಸಭಾ ಸಾರ್ವತ್ರಿಕ ಚುನಾವಣೆ, ರಾಜ್ಯಮಟ್ಟದ ಸುವರ್ಣ ಸಂಭ್ರಮ, ಲಕ್ಕುಂಡಿ ಉತ್ಸವ ಹೀಗೆ ಹಲವಾರು ಬಾರಿ ರಾಜ್ಯಮಟ್ಟದ ಕಾರ್ಯಕ್ರಮಗಳನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರಡಿ, ಪ್ರಭಾರಿ ಮುಖ್ಯೋಪಾಧ್ಯಾಯರಾದ ಜಯಲಕ್ಷ್ಮಿ ಬಿ.ಅಣ್ಣಿಗೇರಿ, ನಗರಸಭೆ ಸದಸ್ಯೆ ವಿದ್ಯಾವತಿ ಗಡಗಿ, ನಿವೃತ್ತ ಮುಖ್ಯೋಪಾಧ್ಯಾಯ ಎಸ್.ಎಸ್. ಮುಳಗುಂದಮಠ, ಶಶಿಕಲಾ ಗುಳೆದವರ, ಸರ್ವಮಂಗಳ ಪತ್ತಾರ್, ಮಂಜುಳಾ ಸಾಂಬ್ರಾಣಿ, ಎಸ್.ಬಿ. ಗದ್ದನಗೇರಿ, ಜಿ.ಎನ್. ಅಳವಂಡಿ, ಶಂಕ್ರಮ್ಮ ಹನಮಗೌಡರ, ಶಾರದಾ ಬಾಣದ, ಶೋಭಾ ಗಾಳಿ, ಎಸ್.ಯು. ಕುಷ್ಟಗಿ, ವಿ.ಬಿ. ಶಿವನಗೌಡರ, ನಾಗಪ್ಪ ಶಿರೋಳ, ರಮೇಶ ಬಸರಿ, ಪದ್ಮಾವತಿ ದಾಸರ, ಎಲ್.ಬಿ. ಮಾಳೊತ್ತರ ಸೇರಿದಂತೆ ಶಾಲೆಯ ಎಲ್ಲ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇತ್ತೀಚೆಗೆ ಚುನಾವಣಾ ಸಂಬಂಧಿತ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಕಾರ್ಯನಿರ್ವಹಿಸಿದ್ದಕ್ಕೆ ಜಿಲ್ಲಾಧಿಕಾರಿಗಳಿಗೆ ರಾಜ್ಯಮಟ್ಟದ ಪ್ರಶಸ್ತಿ ಲಭಿಸಿದೆ. ಜನಸಾಮಾನ್ಯರ ಜಿಲ್ಲಾಧಿಕಾರಿಗಳಾಗಿ ಸೇವೆ ಸಲ್ಲಿಸುವ ಮೂಲಕ, ಜನಸ್ಪಂದನ ಕಾರ್ಯಕ್ರಮದಲ್ಲಿ ಹಲವಾರು ನಾಗರಿಕರಿಗೆ ನ್ಯಾಯ ಒದಗಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಅಂತೆಯೇ ಅಪರ ಜಿಲ್ಲಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿರುವ ಅನ್ನಪೂರ್ಣ ಮುದಕಮ್ಮನವರ ಕೂಡಾ ದಕ್ಷ, ಪ್ರಾಮಾಣಿಕ ಕಾರ್ಯಗಳನ್ನು ಮಾಡುವ ಮೂಲಕ ಸಮಸ್ಯೆ ಹೊತ್ತು ಬಂದವರಿಗೆ ಸದಾ ಸ್ಪಂದಿಸುತ್ತಿದ್ದಾರೆ. ಇವರ ಸೇವೆಯನ್ನು ಸ್ಮರಿಸಿ ಅವ್ವ ಸೇವಾ ಟ್ರಸ್ಟ ಗೌರವಿಸಿದೆ ಎಂದು ಡಾ.ಬಸವರಾಜ ಧಾರವಾಡ ತಿಳಿಸಿದರು.

 


Spread the love

LEAVE A REPLY

Please enter your comment!
Please enter your name here