ಜೂಜಾಟ: ಸಚಿವ ಡಿ ಸುಧಾಕರ್ ಬೆಂಬಲಿಗರು ಸೇರಿದಂತೆ 14 ಮಂದಿ ಬಂಧನ

0
Spread the love

ಚಿತ್ರದುರ್ಗ:  ಹಿರಿಯೂರಿನ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ ಒಬ್ಬ ನಗರಸಭೆ ಸದಸ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರ ಬೆಂಬಲಿಗರು ಸೇರಿದಂತೆ 14 ಮಂದಿಯನ್ನು ಬಂಧಿಸಿ, 4ಲಕ್ಷದ 37ಸಾವಿರ ನಗದು ವಶಪಡಿಸಿಕೊಂಡ ಘಟನೆ ನಡೆದಿದೆ. ಇಬ್ಬರು ನಗರಸಭೆ ಸದಸ್ಯರು ಪರಾರಿಯಾಗಿದ್ದಾರೆ.

Advertisement

ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಜಲಾಶಯದ ಟಿಬಿ ವೃತ್ತದ ಬಳಿ ಇರುವ ಪ್ರವಾಸಿ ಮಂದಿರದಲ್ಲಿ 16 ಮಂದಿ ಇಸ್ಪೀಟ್ ಆಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ಇಬ್ಬರು ಕಾಂಗ್ರೆಸ್ ನಗರಸಭೆ ಸದಸ್ಯರು ಸೇರಿದಂತೆ 16 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಇನ್ನು ಆರೋಪಿಗಳನ್ನು ಬಂಧಿಸಿ 4ಲಕ್ಷದ 37 ಸಾವಿರ ರೂಪಾಯಿ ನಗದು,‌ 52 ಇಸ್ಪೀಟ್ ಎಲೆಗಳು ಹಾಗೂ ಆಟಕ್ಕೆ ಬಳಸಿದ ಬಿಳಿ ಬಟ್ಟೆಯ ಟವಲ್ ವಶಪಡಿಸಿಕೊಂಡಿದ್ದಾರೆ.

ಇಬ್ಬರು ನಗರಸಭೆ ಸದಸ್ಯ ಕೆ ಹಿಂದೆ ಕೂಡ ಇಸ್ಪೀಟ್ ಜೂಜಾಟದಲ್ಲಿ ಒಮ್ಮೆ ಸಿಕ್ಕಿಬಿದ್ದಿದ್ದರು. ಇದೀಗ ಸಚಿವ ಡಿ ಸುಧಾಕರ್ ಅವರ ತವರು ಕ್ಷೇತ್ರದಲ್ಲಿ  ತಮ್ಮ ಬೆಂಬಲಿಗರೇ ಇಂತಹ ದಂಧೆಗೆ ಇಳಿದಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.


Spread the love

LEAVE A REPLY

Please enter your comment!
Please enter your name here