ಗಣಪತಿ, ನಾಗರ ಮೂರ್ತಿಗೆ ಕಾಲಿಂದ ಒದ್ದು ಅವಮಾನ: ಸ್ಥಳದಲ್ಲಿ ಬಿಗುವಿನ ವಾತಾವರಣ!

0
Spread the love

ಶಿವಮೊಗ್ಗ: ಶಿವಮೊಗ್ಗದ ಶಾಂತಿನಗರ ಬಂಗಾರಪ್ಪ ಬಡಾವಣೆಯಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾದ ಘಟನೆ ನಡೆದಿದೆ. ಅನ್ಯಕೋಮಿನ ವ್ಯಕ್ತಿಯೊಬ್ಬನು, ಪಾರ್ಕ್‌ನಲ್ಲಿ ಪ್ರತಿಷ್ಠಾಪಿತವಾಗಿದ್ದ ಗಣೇಶ ಮತ್ತು ನಾಗದೇವರ ವಿಗ್ರಹಗಳತ್ತ ಅವಮಾನಕಾರಿಯಾಗಿ ನಡೆದುಕೊಂಡು,

Advertisement

ಗಣೇಶನ ಮೂರ್ತಿಗೆ ಒದ್ದು, ನಾಗದೇವರ ವಿಗ್ರಹವನ್ನು ಚರಂಡಿಗೆ ಎಸೆದಿದ್ದಾನೆ ಎನ್ನಲಾಗಿದೆ. ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸ್ಥಳದಲ್ಲಿ ಕ್ಷಣಕ್ಷಣಕ್ಕೂ ಉದ್ವಿಗ್ನತೆ ಹೆಚ್ಚಾಗುತ್ತಿದೆ. ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ಸಂಜೀವ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲಾ ಎಸ್‌ಪಿ ಮಿಥುನ್ ಕುಮಾರ್ ಸ್ಪಷ್ಟನೆ

ಘಟನೆ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಮಾತನಾಡಿ,  ಬಡಾವಣೆಯಲ್ಲಿ ಪಾರ್ಕ್‌ಗೆ ಮೀಸಲಾದ ಜಾಗದಲ್ಲಿ ಗಣೇಶ ಮತ್ತು ನಾಗವಿಗ್ರಹ ಪ್ರತಿಷ್ಠಾಪಿತವಾಗಿದ್ದವು. ಸಂಜೆ ಸಮಯದಲ್ಲಿ ವ್ಯಕ್ತಿಯೊಬ್ಬನು ಬಂದು ಅವಮಾನಕಾರ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ನಾವು ತನಿಖೆ ಆರಂಭಿಸಿದ್ದೇವೆ. ಶಾಂತಿ ಭಂಗವಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು. ಯಾವ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನುವುದು ಪತ್ತೆ ಮಾಡಬೇಕಿದೆ. ಕೃತ್ಯ ಎಸಗಿದವನನ್ನು ಪತ್ತೆ ಮಾಡಲಾಗುವುದು ಎಮದು ಹೇಳಿದರು.

 


Spread the love

LEAVE A REPLY

Please enter your comment!
Please enter your name here