ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಆಗಸ್ಟ್ 17ರ ಸಂಜೆ 6 ಗಂಟೆಗೆ ಕಸಾಪ ಕಾರ್ಯಾಲಯದ ತೋಂಟದ ಸಿದ್ಧಲಿಂಗಶ್ರೀ ಕನ್ನಡ ಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ `ಗದಗ ಜಿಲ್ಲೆಯಲ್ಲಿ ಗಾಂಧಿ ಹೆಜ್ಜೆಗಳು’ ಕುರಿತು ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಗಾಂಧಿ ಆಶ್ರಮ ಸಬರಮತಿಯ ಸಂಚಾಲಕ, ಕೆ.ಎಸ್.ಆರ್.ಡಿ.ಪಿ.ಆರ್. ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಪ್ರಕಾಶ ಮಾಚೇನಹಳ್ಳಿ ಇವರು ಉಪನ್ಯಾಸ ನೀಡುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕಸಾಪ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ವಹಿಸುವರು. ಕವಿ, ಗಾಯಕಿ ಪದ್ಮಾ ಜೆ.ಕಬಾಡಿ ಆತಿಥ್ಯ ವಹಿಸುವರು.
ಕಾರ್ಯಕ್ರಮದಲ್ಲಿ ಸಾಹಿತ್ಯಾಭಿಮಾನಿಗಳು, ಪರಿಷತ್ತಿನ ಸದಸ್ಯರು ಪಾಲ್ಗೊಳ್ಳಬೇಕೆಂದು ಕಾರ್ಯದರ್ಶಿಗಳಾದ ಶಿವಾನಂದ ಗಿಡ್ನಂದಿ, ಕಿಶೋರಬಾಬು ನಾಗರಕಟ್ಟಿ, ಡಿ.ಎಸ್. ಬಾಪುರಿ, ದತ್ತಪ್ರಸನ್ನ ಪಾಟೀಲ, ಶ್ರೀಕಾಂತ ಬಡ್ಡೂರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.