ಬೆಳಗಾವಿ ಸುವರ್ಣಸೌಧದ ಮುಂದೆ ಗಾಂಧಿ ಪ್ರತಿಮೆ ಲೋಕಾರ್ಪಣೆ!

0
Spread the love

ಬೆಳಗಾವಿ: 1924 ರಲ್ಲಿ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಪ್ರಯುಕ್ತ ನಗರದಲ್ಲಿ ಸಮಾವೇಶ ಆಯೋಜಿಸುವ ಮೂಲಕ ಆಡಳಿತಾರೂಢ ಕಾಂಗ್ರೆಸ್‌ ಪಕ್ಷ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು,

Advertisement

ಸವಿನೆನಪಿಗಾಗಿ‌ ಇಲ್ಲಿನ ಸುವರ್ಣ ವಿಧಾನಸೌಧದ ಆವರಣದಲ್ಲಿ ಮಹಾತ್ಮಾ ಗಾಂಧೀಜಿಯವರ ಬೃಹತ್ ಪ್ರತಿಮೆಯನ್ನಿಂದು ಮಂಗಳವಾರ ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚರಕ ತಿರುಗಿಸುವ ಮೂಲಕ ಲೋಕಾರ್ಪಣೆಗೊಳಿಸಿದರು.

ಇದೇ ವೇಳೆ ಗದಗ ಗ್ರಾಮೀಣ ವಿವಿಗೆ ʻಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ವಿವಿʼ ಎಂದು ಮರು ನಾಮಕರಣ ಮಾಡಲಾಯಿತು. ಜೊತೆಗೆ ʻಗಾಂಧಿ ಭಾರತʼ ವಿಶೇಷ ಸ್ಟಾಂಪ್ ಸಹ ಬಿಡುಗಡೆಗೊಳಿಸಲಾಯಿತು.

ಸಮಾರಂಭದಲ್ಲಿ ಕಾಂಗ್ರೆಸ್ ನಾಯಕಿ, ಲೋಕಸಭೆ ಸದಸ್ಯೆ ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಾರ್ಯಕ್ರಮದ‌ ಅಧ್ಯಕ್ಷತೆ ವಹಿಸಿದ್ದು, ಮುಖ್ಯ ಅತಿಥಿಗಳಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ , ಕರ್ನಾಟಕ ವಿಧಾನ‌ಸಭೆ ಸಭಾಧ್ಯಕ್ಷ ಯು.ಟಿ ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಪಾಲ್ಗೊಂಡಿದ್ದರು.

 

 


Spread the love

LEAVE A REPLY

Please enter your comment!
Please enter your name here