ಬೆಂಗಳೂರು: ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 14ರಂದು ಜಿಬಿಎ (GBA) ವ್ಯಾಪ್ತಿಯಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿವಧೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಸೋಮವಾರ, ಸೆಪ್ಟೆಂಬರ್ 14ರಂದು ನಗರದ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ನಡೆಸುವಂತಿಲ್ಲ. ಇದರ ಜೊತೆಗೆ ಮಾಂಸದ ಅಂಗಡಿಗಳು ಹಾಗೂ ಮಳಿಗೆಗಳಲ್ಲೂ ಮಾಂಸ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ.
ಹೀಗಾಗಿ ಸೆಪ್ಟೆಂಬರ್ 14ರಂದು ಜಿಬಿಎ ವ್ಯಾಪ್ತಿಯ ಎಲ್ಲಾ ಪ್ರದೇಶಗಳಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿವಧೆ ಸಂಪೂರ್ಣ ಬಂದ್ ಆಗಲಿದೆ. ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಜಿಬಿಎ ವ್ಯಾಪ್ತಿಯಲ್ಲಿ ಈ ನಿರ್ಬಂಧ ಜಾರಿಗೊಳಿಸಲಾಗಿದ್ದು, ಮಾಂಸ ಮಾರಾಟ ಮಾಡುವ ಅಂಗಡಿಗಳು ಹಾಗೂ ಕಸಾಯಿಖಾನೆಗಳು ನಿಯಮ ಪಾಲಿಸುವಂತೆ ಸೂಚಿಸಲಾಗಿದೆ.



