HomeMysuruಗಣೇಶ ಮೆರವಣಿಗೆ ವಿವಾದ: ಬಿಜೆಪಿ ಪ್ರತಿಭಟನೆ ಬಳಿಕ ಮಸೀದಿ ರಸ್ತೆಗೆ ಗ್ರೀನ್ ಸಿಗ್ನಲ್, ಇನ್ಸ್‌ಪೆಕ್ಟರ್ ವಿರುದ್ಧ...

ಗಣೇಶ ಮೆರವಣಿಗೆ ವಿವಾದ: ಬಿಜೆಪಿ ಪ್ರತಿಭಟನೆ ಬಳಿಕ ಮಸೀದಿ ರಸ್ತೆಗೆ ಗ್ರೀನ್ ಸಿಗ್ನಲ್, ಇನ್ಸ್‌ಪೆಕ್ಟರ್ ವಿರುದ್ಧ ಕ್ರಮಕ್ಕೆ ಬ್ರೇಕ್

For Dai;y Updates Join Our whatsapp Group

ಮೈಸೂರು: ಟಿ. ನರಸೀಪುರದ ಗಣೇಶ ಮೆರವಣಿಗೆ ವಿವಾದಕ್ಕೆ ಸದ್ಯಕ್ಕೆ ಸರ್ಕಾರದ ಮಟ್ಟದಲ್ಲಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆದಿದೆ. ಮಸೀದಿ ರಸ್ತೆಯಲ್ಲಿ ಗಣೇಶ ಮೆರವಣಿಗೆ ನಡೆಸಲು ಅವಕಾಶ ಕಲ್ಪಿಸಲಾಗಿದ್ದು, ಮೆರವಣಿಗೆಗೆ ಸಂಬಂಧಿಸಿದಂತೆ ಎಚ್ಚರಿಕೆ ನೀಡಿದ್ದ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ.

ಇನ್ಸ್‌ಪೆಕ್ಟರ್ ಧನಂಜಯ್ ಅವರು ಮಸೀದಿ ಮಾರ್ಗದಲ್ಲಿ ಗಣೇಶ ಮೆರವಣಿಗೆ ವಿಚಾರವಾಗಿ ಗಣೇಶೋತ್ಸವ ಸಮಿತಿಯ ಯುವಕರಿಗೆ ಎಚ್ಚರಿಕೆ ನೀಡಿದ್ದರು ಎನ್ನಲಾಗಿತ್ತು. ಈ ಬೆಳವಣಿಗೆಯನ್ನು ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ವಿರೋಧಿಸಿ, ಇನ್ಸ್‌ಪೆಕ್ಟರ್ ಅಮಾನತು ಅಥವಾ ವರ್ಗಾವಣೆಗೆ ಆಗ್ರಹಿಸಿದ್ದವು.

ಸೆಪ್ಟೆಂಬರ್ 13ರಂದು ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದರು. ಪೊಲೀಸ್ ಅಧಿಕಾರಿಗಳೊಂದಿಗೆ ನಡೆದ ಶಾಂತಿ ಸಭೆ ವಿಫಲವಾದ ಬಳಿಕ ಅಹೋರಾತ್ರಿ ಧರಣಿಗೆ ಬಿಜೆಪಿ ಕರೆ ನೀಡಿತ್ತು. ಗಣೇಶ ಮೂರ್ತಿಯನ್ನು ಕೈಯಲ್ಲಿ ಹಿಡಿದು ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರನ್ನು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದಿದ್ದರು.

ಇದರಿಂದ ಟಿ. ನರಸೀಪುರದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಗೃಹ ಇಲಾಖೆ ಮಸೀದಿ ರಸ್ತೆಯಲ್ಲಿ ಗಣೇಶ ಮೆರವಣಿಗೆಗೆ ಅವಕಾಶ ನೀಡುವ ಮೂಲಕ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರನ್ನು ಮನವೊಲಿಸುವ ಪ್ರಯತ್ನ ನಡೆಸಿದೆ ಎಂದು ಹೇಳಲಾಗುತ್ತಿದೆ. ಆದರೆ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ಕ್ರಮಕ್ಕೆ ಬಿಜೆಪಿ ನಾಯಕರು ಮಾಡಿದ್ದ ಆಗ್ರಹ ಈಡೇರಿಲ್ಲ.

ಈ ಹಿಂದೆ ಟಿ. ನರಸೀಪುರದಲ್ಲಿ ಗಣೇಶೋತ್ಸವದ ಸಂದರ್ಭದಲ್ಲಿ ಗಲಭೆ ಅಥವಾ ಗಲಾಟೆಗಳು ನಡೆದಿರುವ ಉದಾಹರಣೆಗಳಿಲ್ಲ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ. ಇನ್ಸ್‌ಪೆಕ್ಟರ್ ಅವರ ಎಚ್ಚರಿಕೆ ಹಾಗೂ ಅವರ ಮಾತುಗಳಿಂದಲೇ ಪಟ್ಟಣದಲ್ಲಿ ಅನಗತ್ಯ ಬಿಗುವಿನ ವಾತಾವರಣ ನಿರ್ಮಾಣವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಇದೇ ಸಂದರ್ಭದಲ್ಲಿ ಪ್ರತಾಪ್ ಸಿಂಹ ವಿರುದ್ಧವೂ ಪ್ರತಿಭಟನೆ ನಡೆದಿದೆ. ಪೊಲೀಸ್ ಠಾಣೆಗೆ ನುಗ್ಗುವ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ದಲಿತ ಸಂಘಟನೆಗಳು ಅವರನ್ನು ಬಂಧಿಸುವಂತೆ ಆಗ್ರಹಿಸಿದವು. ಪ್ರತಿಯಾಗಿ ಪ್ರತಾಪ್ ಸಿಂಹ ಬೆಂಬಲಿಗರು ಠಾಣೆ ಎದುರು ಜಮಾಯಿಸಿ ಅವರ ಪರ ಘೋಷಣೆ ಕೂಗಿದರು. ಎರಡೂ ಗುಂಪುಗಳ ಪ್ರತಿಭಟನೆಯಿಂದ ಟಿ. ನರಸೀಪುರ ಪೊಲೀಸ್ ಠಾಣೆ ಮುಂಭಾಗದಲ್ಲಿ ಭಾರೀ ಹೈಡ್ರಾಮಾ ನಡೆದಿತ್ತು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img