ಬೆಂಗಳೂರು:- ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬರ ಮೇಲೆ ಬಿಯರ್ ಬಾಟಲಿಯಿಂದ ದಾಳಿ ನಡೆದ ಘಟನೆ ಬೆಂಗಳೂರಿನ ಆನೇಕಲ್‌ನ ಮಾರುತಿ ಬಾರ್ ಅಂಡ್ ರೆಸ್ಟೋರೆಂಟ್‌ನಲ್ಲಿ ಸಂಭವಿಸಿದೆ.
ಬಾರ್‌ಗೆ ಮದ್ಯಪಾನಕ್ಕೆ ಬಂದಿದ್ದ ಪ್ರಕಾಶ್ ಎಂಬುವವರ ಮೇಲೆ, ಇನ್ನೊಂದು ಟೇಬಲ್‌ನಲ್ಲಿ ಕುಳಿತಿದ್ದ ಮೂವರು ಏಕಾಏಕಿ ಬಂದು ಹಲ್ಲೆ ನಡೆಸಿದ್ದಾರೆ. ದಾಳಿಯ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಬಾಟಲಿಯಿಂದ ತಲೆಗೆ ಹೊಡೆದ ಪರಿಣಾಮ ಪ್ರಕಾಶ್‌ಗೆ ಗಂಭೀರ ಗಾಯವಾಗಿದ್ದು, ರಕ್ತಸ್ರಾವವಾಗಿದೆ. ಗಾಯಾಳುವನ್ನು ತಕ್ಷಣ ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದಾಳಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ಬಾರ್‌ನಲ್ಲಿದ್ದ ಇತರ ಗ್ರಾಹಕರ ಪ್ರಕಾರ, ಸಣ್ಣ ಕಿರಿಕಿರಿಯೇ ಈ ಹಲ್ಲೆಗೆ ಕಾರಣವಾಗಿದೆ ಎನ್ನಲಾಗಿದೆ.



