ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿಗೆ ಬ್ಲ್ಯಾಕ್‌ಮೇಲ್ ಮಾಡಿ ಸಾಮೂಹಿಕ ಅತ್ಯಾಚಾರ ಎಸಗಿದ ಗಂಭೀರ ಆರೋಪದ ಮೇಲೆ ಐವರು ಆರೋಪಿಗಳನ್ನು ಚಿಕ್ಕಮಗಳೂರಿನ ಗೋಣಿಬೀಡು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರ ಪ್ರಕಾರ, ಸಂತ್ರಸ್ತೆಯ ಫೋಟೋವನ್ನು ತೋರಿಸಿ ಬೆದರಿಕೆ ಹಾಕಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಗೋಣಿಬೀಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.
ಪ್ರಕರಣದ ಪ್ರಮುಖ ಆರೋಪಿ ನ್ಯಾಯಾಲಯಕ್ಕೆ ಶರಣಾಗಿದ್ದಾನೆ ಎಂದು ತಿಳಿದುಬಂದಿದ್ದು, ಈತ ಈ ಹಿಂದೆ ಕೂಡ ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಎನ್ನಲಾಗಿದೆ.
ಘಟನೆ ಬಳಿಕ ಸಂತ್ರಸ್ತೆ ಗಂಡು ಮಗುವಿಗೆ ಜನ್ಮ ನೀಡಿರುವುದಾಗಿ ತಿಳಿದುಬಂದಿದೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಜಿಲ್ಲಾ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಿಪಿಐ ರಾಜಶೇಖರ್ ಹಾಗೂ ಪಿಎಸ್‌ಐ ಶ್ರೀನಾಥ್ ರೆಡ್ಡಿ ನೇತೃತ್ವದಲ್ಲಿ ಪ್ರಕರಣದ ತನಿಖೆ ಮುಂದುವರಿದಿದೆ.



