ಗದಗ:- ಜಿಲ್ಲೆಯ ನರಗುಂದದ ಅಬಕಾರಿ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
Advertisement
ಬಂಧಿತ ಆರೋಪಿಯನ್ನು ಹದ್ಲಿ ಗ್ರಾಮದ ನಿವಾಸಿ ದಾವಲಸಾಬ್ ನರಗುಂದ ಎಂದು ಗುರುತಿಸಲಾಗಿದೆ. ಆರೋಪಿಯು, ಗದಗ ಜಿಲ್ಲೆ ನರಗುಂದ ತಾಲೂಕಿನ ಹದ್ಲಿ ಕ್ರಾಸ್ ಬಳಿ ಸಣ್ಣ ಸಣ್ಣ ಪ್ಯಾಕೆಟ್ ಮಾಡಿ ಒಣ ಗಾಂಜಾ ಮಾರಾಟ ಮಾಡುತ್ತಿದ್ದ.
ಖಚಿತ ಮಾಹಿತಿ ಮೇರೆಗೆ ಅಬಕಾರಿ ಡಿಸಿ ಲಕ್ಷ್ಮಿ ನಾಯಕ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅಬಕಾರಿ ಸಿಪಿಐ ಬಸವರಾಜ್ ಜಾಮಗೊಂಡ ನೇತೃತ್ವದಲ್ಲಿ ದಾಳಿ ನಡೆದಿದೆ. ಇದೀಗ ಆರೋಪಿಯಿಂದ 5400 ರೂ ಮೌಲ್ಯದ 131 ಗ್ರಾಂ ಒಣ ಗಾಂಜಾ ಹಾಗೂ 20 ಸಾವಿರ ಮೌಲ್ಯದ ಬೈಕ್ ಅನ್ನು ಜಪ್ತಿ ಮಾಡಲಾಗಿದೆ.
ಘಟನೆ ಸಂಬಂಧ ನರಗುಂದ ಅಬಕಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.