ಬೆಂಗಳೂರು: ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 14 ಕೋಟಿ ಮೌಲ್ಯದ ಗಾಂಜಾ ಮತ್ತು ಇ – ಸಿಗರೇಟ್ಗಳು ವಶಕ್ಕೆ ಪಡೆದಿದ್ದಾರೆ. ಕಳೆದ 18 ದಿನಗಳಲ್ಲಿ ನಡೆಸಿದ ತಪಾಸಣೆಯಲ್ಲಿ ಸುಮಾರು 14.22 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾ, ಇ-ಸಿಗರೇಟ್ ವಶಪಡಿಸಿಕೊಂಡಿದಾರೆ.
ಪ್ರತ್ಯೇಕ ಪ್ರಕರಣಗಳಲ್ಲಿ ವಿದೇಶಗಳಿಂದ ಅಕ್ರಮವಾಗಿ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ 10 ಮಂದಿ ಪ್ರಯಾಣಿಕರನ್ನು ವಶಕ್ಕೆ ಪಡೆಯಲಾಗಿದೆ. ಬ್ಯಾಂಕಾಕ್ ಸೇರಿದಂತೆ ವಿದೇಶದ ಹಲವು ನಗರಗಳಿಂದ ಬಂದ ಪ್ರಯಾಣಿಕರು ತಮ್ಮ ಬ್ಯಾಗ್‌ಗಳಲ್ಲಿ 38.64 ಕೆ.ಜಿ ಹೈಡ್ರೋಪೋನಿಕ್ಸ್ ಗಾಂಜಾ, 2.38 ಲಕ್ಷ ರೂ. ಮೌಲ್ಯದ ವಿದೇಶಿ ಇ-ಸಿಗರೇಟ್‌ಗಳು ಹಾಗೂ ಎಂಟು ಬಗೆಯ ಅಪರೂಪದ ಜೀವಂತ ಪ್ರಾಣಿಗಳನ್ನು ಸಾಗಿಸುತ್ತಿದ್ದರೆಂದು ಗೊತ್ತಾಗಿದೆ.
ಏರ್ಪೋರ್ಟ್ನ ಪ್ರಯಾಣಿಕರ ಚೆಕಿಂಗ್ ಸಂದರ್ಭದಲ್ಲಿ ಸಂಶಯಾಸ್ಪದ ಬ್ಯಾಗ್‌ಗಳನ್ನು ಸ್ಕ್ಯಾನಿಂಗ್ ಮಾಡಿದಾಗ ಈ ಅಕ್ರಮ ವಸ್ತುಗಳು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಕಸ್ಟಮ್ಸ್ ಅಧಿಕಾರಿಗಳು ಕಸ್ಟಮ್ಸ್ ಆಕ್ಟ್ ಮತ್ತು ಸಂಬಂಧಿತ ಕಾನೂನುಗಳಡಿ ಪ್ರಕರಣ ದಾಖಲಿಸಿ, ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.



