ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ

0
basavanna
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಇತ್ತೀಚೆಗೆ ರಾಜ್ಯ ಸರ್ಕಾರ ವಿಶ್ವಗುರು ಬಸವೇಶ್ವರರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದಲ್ಲದೇ ದಿ.೧೭ರಂದು ವಿಧಾನಸೌಧ ಹಾಗೂ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಬಸವೇಶ್ವರ ಭಾವಚಿತ್ರ ಅನಾವರಣಗೊಳಿಸಲು ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ನಗರದ ಹತ್ತಿಕಾಳ ಕೂಟದಲ್ಲಿರುವ ಬಸವೇಶ್ವರ ವೃತ್ತದಲ್ಲಿ ಬಸವಪರ ಸಂಘಟನೆಗಳ ಸದಸ್ಯರು ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

Advertisement

ಬಸವಪರ ನಿರ್ಣಯಗಳನ್ನು ಕೈಗೊಂಡ ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲರಿಗೆ ಬಸವಾನುಯಾಯಿಗಳು ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ಎಸ್.ಎನ್. ಬಳ್ಳಾರಿ, ಎಂ.ಎಸ್. ಅಂಗಡಿ, ಶರೀಫ ಬಿಳೆಎಲಿ, ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಕೆ.ಎಸ್. ಚಟ್ಟಿ, ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಶೇಖಣ್ಣ ಕಳಸಾಪೂರ, ಬಸವದಳ ಉಪಾಧ್ಯಕ್ಷ ಪ್ರಕಾಶ ಅಸುಂಡಿ, ಶರಣ ಸಾಹಿತ್ಯ ಪರಿಷತ್ ಕಾರ್ಯದರ್ಶಿ ರಾಜಶೇಖರ ದಾನರಡ್ಡಿ, ನಗರಸಭೆ ಸದಸ್ಯರಾದ ವಿನಾಯಕ ಮಾನ್ವಿ, ಶಿವಕುಮಾರ ರಾಮನಕೊಪ್ಪ, ಎಂ.ಎಸ್. ಪರ್ವತಗೌಡ್ರ, ಎನ್.ಎಂ. ಪವಾಡಿಗೌಡ್ರ, ಎಂ.ಬಿ. ಲಿಂಗದಾಳ, ವಿ.ಬಿ. ಕಾಮಣ್ಣವರ, ಮುರುಘೇಶ ಬಡ್ನಿ ಸೇರಿದಂತೆ ಲಿಂಗಾಯತ ಪ್ರಗತಿಶೀಲ ಸಂಘ, ಬಸವದಳ-ಬಸವಕೇಂದ್ರ, ಜಾಗತಿಕ ಲಿಂಗಾಯತ ಮಹಾಸಭಾ, ಶರಣ ಸಾಹಿತ್ಯ ಪರಿಷತ್ ಸೇರಿದಂತೆ ವಿವಿಧ ಬಸವಪರ ಸಂಘಟನೆಗಳ ಸದಸ್ಯರು ಭಾಗವಹಿಸಿದ್ದರು.


Spread the love

LEAVE A REPLY

Please enter your comment!
Please enter your name here