ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್ ಕೊರತೆಯಿಂದ ಹೋಟೆಲ್ ಮಾಲೀಕರಿಗೆ ಸಂಕಷ್ಟ ಉಂಟಾಗಿದೆ.
ಸಿಲಿಂಡರ್ ಇಲ್ಲದ ಕಾರಣ ಪುರಿ, ದೋಸೆ ಸೇರಿದಂತೆ ಹೆಚ್ಚು ಗ್ಯಾಸ್ ಬಳಕೆಯ ಐಟಂಗಳ ತಯಾರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೆಲ ಸಣ್ಣ ಹೋಟೆಲ್‌ಗಳು ಮುಚ್ಚಿರುವಾಗ, ದೊಡ್ಡ ಹೋಟೆಲ್‌ಗಳು ಕೆಲ ದಿನಗಳಷ್ಟು ಮಾತ್ರ ವ್ಯವಹಾರ ನಡೆಸುತ್ತಿದ್ದಾರೆ.
ಬೆಲೆ ಏರಿಕೆ ಮತ್ತು ಪೂರೈಕೆ ಕೊರತೆಯಿಂದ ಉದ್ಯೋಗಿಯಾಗಿರುವ ಸಾವಿರಾರು ಹೋಟೆಲ್ ಕೆಲಸಗಾರರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಕೆಲ ಹೋಟೆಲ್ ಮಾಲೀಕರು ಸರ್ಕಾರದ ವಿಳಂಬ ನೀತಿಯನ್ನು ಟೀಕಿಸುತ್ತಿದ್ದಾರೆ. ಇನ್ನು ಬೆಂಗಳೂರಿನ ಅನೇಕ ಹೋಟೆಲ್‌ಗಳು ಮುಚ್ಚುವ ಸಾಧ್ಯತೆ ಉಂಟು ಎಂಬ ಆತಂಕ ಉಂಟಾಗಿದೆ.
ಮೂರೇ ದಿನಗಳಲ್ಲಿ ಸಿಲಿಂಡರ್ ಬೆಲೆ 1,600 ರೂಪಾಯಿಯಿಂದ 2,200 ರೂಪಾಯಿಗೆ ಏರಿಕೆಯಾಗಿದೆ. ಹೋಟೆಲ್ ಮಾಲೀಕರು ಪೂರೈಕೆ ಸಮರ್ಪಕವಾಗದಿದ್ದರೆ ಉದ್ಯಮ ಸಂಪೂರ್ಣ ಕುಸಿಯಲಿದೆ ಎಂದು ಎಚ್ಚರಿಸಿದ್ದಾರೆ.



