ಗೌರಿ ಲಂಕೇಶ್‌ ಹತ್ಯೆ ಪ್ರಕರಣ: ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು

0
Spread the love

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಆರೋಪಿಗಳಾದ ವಾಸುದೇವ ಭಗವಾನ್ ಮತ್ತು ಅಮಿತ್ ಬದ್ದಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ ಆರೋಪಿಗಳಿಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದೆ.

Advertisement

ಆರೋಪಿಗಳಾದ ವಾಸುದೇವ ಭಗವಾನ್ ಮತ್ತು ಅಮಿತ್ ಬದ್ದಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಪರಿಗಣಿಸಿ ವಿಚಾರಣೆ ನಡೆಸಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಗೌರಿ ಲಂಕೇಶ್‌ ಅವರನ್ನು 2017ರ ಸೆಪ್ಟೆಂಬರ್‌ 5ರಂದು ಕೆಲಸ ಮುಗಿಸಿ ಮನೆಗೆ ಮರಳಿದ ವೇಳೆ ಗುಂಡು ಹಾರಿಸಿ ಕೊಲ್ಲಲಾಗಿತ್ತು.

ಬೆಂಗಳೂರಿನ ರಾಜರಾಜೇಶ್ವರಿ ನಗರ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 302, 120ಬಿ, 114, 118, 109, 201, 203, 204 ಮತ್ತು 35, ಸಶಸ್ತ್ರ ಕಾಯಿದೆಯ ಸೆಕ್ಷನ್‌ಗಳಾದ 25(1), 25(1B), 27(1) ಮತ್ತು ಕೋಕಾ ಕಾಯಿದೆಯ ಸೆಕ್ಷನ್‌ಗಳಾದ 3(1)(I), 3(2), 3(3), 3(4) ಅಡಿ ಪ್ರಕರಣ ದಾಖಲಿಸಲಾಗಿದೆ.


Spread the love

LEAVE A REPLY

Please enter your comment!
Please enter your name here