ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಸಾಧಕರಿಗೆ ಕೊಡಮಾಡುವ 2024ನೇ ಸಾಲಿನ ವ್ಯಕ್ತಿ ವಿಭಾಗದ ರಾಜ್ಯ ಪ್ರಶಸ್ತಿಯನ್ನು ಬೆಂಗಳೂರಿನ ಜವಾಹಾರ ಬಾಲ ಭವನದಲ್ಲಿ ಜರುಗಿದ ಮಕ್ಕಳ ದಿನಾಚರಣೆಯ ಸಮಾರಂಭದಲ್ಲಿ ಜನಪದ ಕೂಗು ಕಾರ್ಯಕ್ರಮದ ಮೂಲಕ ಮಕ್ಕಳಿಗೆ ಮೌಲ್ಯಾತ್ಮಕ ಜೀವನ ಕೌಶಲ್ಯ ತರಬೇತಿ ನೀಡುತ್ತಿರುವ ಖ್ಯಾತ ಜನಪದ ಕಲಾವಿದ ಜಂತಲಿ ಶಿರೂರು ಗ್ರಾಮದ ಗವಿಶಿದ್ಧಯ್ಯ ಹಳ್ಳಿಕೇರಿಮಠ ಅವರಿಗೆ ಪ್ರದಾನ ಮಾಡಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಲಕ್ಷ್ಮೀ ಆರ್.ಹೆಬ್ಳಾಕರ್ ಅವರು ಪ್ರಶಸ್ತಿ ಫಲಕ ನೀಡಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಶಾಸಕರು, ನಿಗಮ ಮಂಡಳಿಗಳ ಅಧ್ಯಕ್ಷರು, ಅಧಿಕಾರಿಗಳು ಉಪಸ್ಥಿತರಿದ್ದರು.



