ವಿಜಯಸಾಕ್ಷಿ ಸುದ್ದಿ, ಗದಗ: ಬೆಟಗೇರಿಯ ಶ್ರೀಗಾಯತ್ರಿ ಪತ್ತಿನ ಸಹಕಾರ ಸಂಘ ನಿಯಮಿತದ ಬೆಟಗೇರಿ–ಗದಗ ಶಾಖೆಯ ನೂತನ ಕಟ್ಟಡವನ್ನು ಮಾಜಿ ಶಾಸಕ ಹಾಗೂ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ ಉದ್ಘಾಟಿಸಿದರು.
ಬೆಟಗೇರಿಯ ಶ್ರೀಗಾಯತ್ರಿ ಪತ್ತಿನ ಸಹಕಾರ ಸಂಘ ನಿಯಮಿತದ ಬೆಟಗೇರಿ–ಗದಗ ಶಾಖೆಯ ನೂತನ ಕಟ್ಟಡವನ್ನು ಮಾಜಿ ಶಾಸಕ ಹಾಗೂ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ನೇಕಾರರ ಶ್ರೇಯೋಭಿವೃದ್ಧಿಗಾಗಿ ಆರಂಭವಾದ ಸಂಘ ಇಂದು ರೈತರು, ಬಡವರು ಹಾಗೂ ವ್ಯಾಪಾರಿಗಳ ಆರ್ಥಿಕ ಸಬಲೀಕರಣದಲ್ಲಿ ಮಹತ್ವದ ಪಾತ್ರ ವಹಿಸಿದೆ. ಠೇವುದಾರರ ವಿಶ್ವಾಸ, ಸಾಲಗಾರರ ಪ್ರಾಮಾಣಿಕತೆ ಹಾಗೂ ಸಿಬ್ಬಂದಿಯ ಕರ್ತವ್ಯನಿಷ್ಠೆಯೇ ಸಂಘದ ಯಶಸ್ಸಿಗೆ ಕಾರಣ ಎಂದರು.
ಲಾಕರ್ ಉದ್ಘಾಟಿಸಿದ ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಸಂಘದ ಬೆಳವಣಿಗೆ ಶ್ಲಾಘನೀಯವಾಗಿದ್ದು, ಸುಮಾರು 40 ಶಾಖೆಗಳ ಮೂಲಕ ₹300 ಕೋಟಿಗೂ ಅಧಿಕ ಠೇವಣಿ ಸಂಗ್ರಹಿಸಿರುವುದು ಜನರ ವಿಶ್ವಾಸದ ಪ್ರತೀಕ ಎಂದರು.
ಮಾಜಿ ಶಾಸಕ ಎಸ್.ಜಿ. ನಂಜಯ್ಯನಮಠ ಕಾರ್ಯಕ್ರಮ ಉದ್ಘಾಟಿಸಿ, ಸಂಸ್ಥಾಪಕ ಅಧ್ಯಕ್ಷ ರವೀಂದ್ರ ಪಿ. ಕಲಬುರ್ಗಿ ಅವರ ಸಮಾಜಮುಖಿ ಸೇವೆಯನ್ನು ಪ್ರಶಂಸಿಸಿದರು.
ಅಧ್ಯಕ್ಷತೆ ವಹಿಸಿದ್ದ ರವೀಂದ್ರ ಕಲಬುರ್ಗಿ ಮಾತನಾಡಿ, ಗ್ರಾಮೀಣ ಜನರ ಆರ್ಥಿಕ ಅಭಿವೃದ್ಧಿಗೆ ಸಂಘ ಇನ್ನಷ್ಟು ಸೇವೆ ಸಲ್ಲಿಸಲಿದೆ ಎಂದರು. ಕಾರ್ಯಕ್ರಮದಲ್ಲಿ ವಿವಿಧ ಗಣ್ಯರನ್ನು ಸನ್ಮಾನಿಸಲಾಯಿತು.
“ರೈತರು, ಬಡವರು ಹಾಗೂ ವ್ಯಾಪಾರಿಗಳಲ್ಲಿ ಆರ್ಥಿಕ ಶಕ್ತಿ ತುಂಬುವಲ್ಲಿ ಶ್ರೀಗಾಯತ್ರಿ ಪತ್ತಿನ ಸಂಘದ ಸೇವೆ ಸಾರ್ಥಕವಾಗಿದೆ.”
– ಡಿ.ಆರ್. ಪಾಟೀಲ, ಮಾಜಿ ಶಾಸಕ



