ಬೆಂಗಳೂರು: ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರದಲ್ಲಿ ನಡೆದ ಬ್ಯಾನರ್ ಗಲಾಟೆಗಳ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ನಗರಾದ್ಯಂತ ಅನಧಿಕೃತವಾಗಿ ಅಳವಡಿಸಿದ್ದ ಬ್ಯಾನರ್ ಹಾಗೂ ಫ್ಲೆಕ್ಸ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ.
ಸ್ಕೈವಾಕ್, ಬಸ್ ಶೆಲ್ಟರ್‌ಗಳು ಹಾಗೂ ಸಾರ್ವಜನಿಕ ಸ್ಥಳಗಳ ಸಮೀಪ ಅಳವಡಿಸಲಾಗಿದ್ದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಲಾಗಿದ್ದು, ಶಾಂತಿನಗರ, ಸಿ.ವಿ.ರಾಮನ್ ನಗರ, ಶಿವಾಜಿನಗರ, ಚಿಕ್ಕಪೇಟೆ ಹಾಗೂ ಗಾಂಧಿನಗರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಹೋರ್ಡಿಂಗ್ಸ್‌ಗಳನ್ನು ತೆಗೆದುಹಾಕಲಾಗಿದೆ. ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾತ್ರವೇ 473 ಫ್ಲೆಕ್ಸ್‌ಗಳನ್ನು ತೆರವುಗೊಳಿಸಿ ದಂಡ ವಸೂಲಿ ಮಾಡಲಾಗಿದೆ.
ನಗರ ಸೌಂದರ್ಯ ಹಾಗೂ ಸಾರ್ವಜನಿಕರ ಸುರಕ್ಷತೆಗೆ ಧಕ್ಕೆಯಾಗುವ ಇಂತಹ ಅಕ್ರಮಗಳನ್ನು ಇನ್ನು ಮುಂದೆ ಸಹಿಸುವುದಿಲ್ಲ ಎಂದು ಜಿಬಿಎ ಎಚ್ಚರಿಕೆ ನೀಡಿದ್ದು, ಅನುಮೋದನೆ ಇಲ್ಲದೆ ಬ್ಯಾನರ್ ಅಳವಡಿಸುವವರ ವಿರುದ್ಧ ನ್ಯಾಯಾಲಯಗಳಲ್ಲಿ ಪ್ರಕರಣ ದಾಖಲಿಸುವುದಾಗಿ ಮುಖ್ಯ ಆಯುಕ್ತ ಮಹೇಶ್ವರ ರಾವ್ ತಿಳಿಸಿದ್ದಾರೆ.



