ಮೈಸೂರು:- ಲೈನ್ ಮುಖಾಂತರ ಮೈಸೂರು ದಸರಾ ಗೋಲ್ಡ್ ಕಾರ್ಡ್ ಹಾಗೂ ಟಿಕೆಟ್ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಎಲ್ಲರಿಗೂ ಸಿಗಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ 5 ದಿನಗಳ ಕಾಲ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಸೆಪ್ಟೆಂಬರ್ 26 ರಿಂದ 30 ರವರೆಗೂ ಮಾರಾಟಕ್ಕೆ ಅವಕಾಶ ಇರಲಿದೆ.
ಪ್ರತಿನಿತ್ಯ 1000 ದಿಂದ 1500 ಗೋಲ್ಡ್ ಕಾರ್ಡ್ಗಳು ಮಾರಾಟ ಮಾಡಲಿದ್ದು, ಒಂದು ‘ದಸರಾ ಗೋಲ್ಡ್ ಕಾರ್ಡ್’ಗೆ 6500 ರೂ. ನಿಗದಿ ಪಡಿಸಲಾಗಿದೆ. ಒಂದು ದಸರಾ ಗೋಲ್ಡ್ ಕಾರ್ಡ್ನಲ್ಲಿ ಒಬ್ಬರು ಜಂಬೂಸವಾರಿ ಮೆರವಣಿಗೆ, ಪಂಜಿನ ಕವಾಯತು, ಚಾಮುಂಡಿ ಬೆಟ್ಟ, ಅರಮನೆ, ಚಾಮರಾಜೇಂದ್ರ ಮೃಗಾಲಯ ವೀಕ್ಷಣೆಗೆ ಅವಕಾಶ ನೀಡಲಾಗಿದೆ.
ಅರಮನೆ ಆವರಣದಲ್ಲಿ ಜಂಬೂಸವಾರಿ ಮೆರವಣಿಗೆ ವೀಕ್ಷಣೆಗೆ ಟಿಕೆಟ್ ದರ 3500 ರೂ., ಪಂಜಿನ ಕವಾಯತು ವೀಕ್ಷಣೆಗೆ ಟಿಕೆಟ್ ದರ 1000 ರೂ. ನಿಗದಿ ಮಾಡಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹಾದೇವಪ್ಪ ಮಾಹಿತಿ ನೀಡಿದ್ದಾರೆ.