ರಸ್ತೆಯ ಗುಂಡಿ ಅವಾಂತರಕ್ಕೆ ಮುಕ್ತಿ ನೀಡಿ

0
Spread the love

ವಿಜಯಸಾಕ್ಷಿ ಸುದ್ದಿ, ಬೆಟಗೇರಿ: ಬೆಟಗೇರಿಯಿಂದ ನರಸಾಪೂರಕ್ಕೆ ಹೋಗುವ ಪಿ.ಬಿ. ರಸ್ತೆಗೆ ಹೊಂದಿಕೊಂಡಿರುವ ಹುಲಕೋಟಿ ಶಾಲೆಗೆ ಹೋಗುವ ಮಾರ್ಗದಲ್ಲಿ ಗುಂಡಿ ತೋಡಿ ಸುಮಾರು ಏಳು ತಿಂಗಳುಗಳಿಂದ ದುರಸ್ತಿ ಮಾಡದೇ ಹಾಗೆಯೇ ಬಿಟ್ಟಿರುವದರಿಂದ ನಿತ್ಯ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ನಿತ್ಯವೂ ಅಪಘಾತಗಳು ಸಂಭವಿಸುತ್ತಿವೆ ಎಂದು ನಗರಸಭಾ ಸದಸ್ಯ ರಾಘವೇಂದ್ರ ಯಳವತ್ತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement

ಈಬಗ್ಗೆ ಈಗಾಗಲೇ ಎರಡು ಬಾರಿ ಜಿಲ್ಲಾಧಿಕಾರಿಗಳಿಗೆ, ಪೌರಾಯುಕ್ತರಿಗೆ, ಸಂಬಂಧಪಟ್ಟ ಅಧಿಕಾರಿಗಳಿಗೆ ಮೌಖಿಕವಾಗಿ ಹಾಗೂ ಲಿಖಿತವಾಗಿ ಮನವಿಯನ್ನು ಸಲ್ಲಿಸಿದರೂ ಯಾವುದೇ ಕ್ರಮ ಕೈಕೊಂಡಿಲ್ಲ.

ಜಿಲ್ಲಾಧಿಕಾರಿಗಳು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಅಗಿದ ಗುಂಡಿಗಳನ್ನು ಸರಿಪಡಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿ, ಸೂಕ್ತ ಕ್ರಮ ಕೈಕೊಂಡು ಸುಗಮ ಸಂಚಾರಕ್ಕೆ ಮಾಡಿಕೊಡಬೇಕು ಎಂದು ಅವರು ಆಗ್ರಹಿಸಿದದಾರೆ.


Spread the love

LEAVE A REPLY

Please enter your comment!
Please enter your name here