ಘತ್ತರಗಾ ಹಾಗೂ ಗಾಣಗಾಪೂರ ಸೇತುವೆ ಜಲಾವೃತ: ರಸ್ತೆ ಸಂಚಾರಕ್ಕೆ ನಿರ್ಬಂಧ

0
Spread the love

ಕಲಬುರಗಿ: ಒಂದೆಡೆ ಮಳೆಯಿಂದ ಹಾನಿಯಾದರೇ ಮತ್ತೊಂದೆಡೆ ಭೂ ಕುಸಿತದ ತೀವ್ರತೆ ಹೆಚ್ಚಾಗಿದೆ. ಹೀಗಿರುವಾಗಲೇ ಘತ್ತರಗಾ ಮತ್ತು ಗಾಣಗಾಪೂರ ಸೇತುವೆ ಮೇಲೆ ನೀರು ಹರಿಯುತ್ತಿದೆ. ಮಹಾರಾಷ್ಟ್ರದ ಉಜ್ಜನಿ ಮತ್ತು ವೀರ್ ಜಲಾಶಯದಿಂದ ಸೋಮವಾರ ಭೀಮಾ ನದಿಗೆ ಹರಿಬಿಡಲಾದ ಸುಮಾರು 1 ಲಕ್ಷಕ್ಕೂ ಹೆಚ್ಚಿನ ಕ್ಯುಸೆಕ್‌ ನೀರು ಬುಧವಾರ ತಡರಾತ್ರಿ ಅಫಜಲ್ಪುರ ತಾಲೂಕಿನ ಸೊನ್ನ ಬ್ರಿಡ್ಜ್ ಮೂಲಕ ಜಿಲ್ಲೆಯ ಭೀಮಾ ನದಿಗೆ ಪ್ರವೇಶಿಸಿದೆ.

Advertisement

ಇದರಿಂದಾಗಿ ಅಫಜಲ್ಪುರ ತಾಲೂಕಿನ ಘತ್ತರಗಾ ಹಾಗೂ ಗಾಣಗಾಪೂರ ಸೇತುವೆ ಮೇಲೂ ನೀರು ಹರಿಯುತ್ತಿದ್ದು ಗುರುವಾರ ಮತ್ತು ಶುಕ್ರವಾರ ಸೇತುವೆ ಮೇಲಿನ ಸಂಚಾರವನ್ನು ಜಿಲ್ಲಾಡಳಿತ ನಿರ್ಬಂಧಿಸಿದೆ. ಅಫಜಲ್ಪುರ ತಾಲೂಕಿನ ಘತ್ತರಗಾ-ಜೇರಟಗಿ ಮತ್ತು ಗಾಣಗಾಪುರ-ಇಟಗಾ ಸಂಪರ್ಕ ಕಲ್ಪಿಸುವ ಈ ಎರಡು ಸೇತುವೆ ಬಳಿ ಪೊಲೀಸ್ ಸಿಬ್ಬಂದಿ ಠಿಕಾಣಿ ಹೂಡಿದ್ದು,

ತಡರಾತ್ರಿ ಹೆಚ್ಚಿನ ಪ್ರಮಾಣದಲ್ಲಿ ನೀರು ಬರುತ್ತಿದ್ದಂತೆ ಮುಂಜಾಗ್ರತೆಯ ಕ್ರಮವಾಗಿ ಬ್ಯಾರಿಕೇಡ್ ಹಾಕಿ ಸಾರ್ವಜನಿಕರ ಸಂಚಾರ ಬಂದ್ ಮಾಡಿದ್ದಾರೆ. ಸ್ಥಳೀಯ ನಿವಾಸಿಗಳು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಮನವಿ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here