‘ಡೆವಿಲ್’ನಲ್ಲಿ ಗಿಲ್ಲಿಯ ಹೊಸ ಅವತಾರ: ಬಿಗ್ ಬಾಸ್ ಸ್ಟಾರ್‌ಗೆ ಸಿನಿಮಾ ಬ್ರೇಕ್!

0
Spread the love

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಟಾಪ್ ಸ್ಪರ್ಧಿಯಾಗಿ ಮಿಂಚುತ್ತಿರುವ ಗಿಲ್ಲಿ ನಟ ಈಗ ಚರ್ಚೆಯಲ್ಲಿದ್ದಾರೆ. ರಿಯಾಲಿಟಿ ಶೋನಲ್ಲಿ ತಮ್ಮ ಆಟದಿಂದ ಎಲ್ಲರ ಗಮನ ಸೆಳೆಯುತ್ತಿರುವ ಗಿಲ್ಲಿಯ ಕುರಿತು ಒಂದು ವಿಶೇಷ ಸುದ್ದಿ ಹೊರಬಿದ್ದಿದೆ. ಅವರು ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಡೆವಿಲ್’ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿರುವುದು ಈಗ ಬಹಿರಂಗವಾಗಿದೆ.

Advertisement

ಚಿತ್ರತಂಡ ಗಿಲ್ಲಿಯ ಹೊಸ ಲುಕ್‌ನ ಪೋಸ್ಟರ್ ಬಿಡುಗಡೆ ಮಾಡಿದ್ದು, ಫುಲ್ ಸ್ಲೀವ್ ಶರ್ಟ್ ಹಾಗೂ ಟೈ ಧರಿಸಿ ಸೀರಿಯಸ್ ಲುಕ್‌ನಲ್ಲಿ ಕಾಣಿಸಿಕೊಂಡಿರುವ ಅವರು ವಿಭಿನ್ನ ಪಾತ್ರದಲ್ಲಿ ನಟಿಸುತ್ತಿದ್ದಾರೆಂಬ ಹಿಂಟ್ ನೀಡಿದೆ.

ಕಳೆದ ವರ್ಷ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧಿತರಾಗಿದ್ದರು. ಬಳಿಕ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದರೂ, ಸುಪ್ರೀಂ ಕೋರ್ಟ್ ಆದೇಶದಂತೆ ಮತ್ತೆ ಜೈಲಿನತ್ತ ಹಿಂದಿರುಗಬೇಕಾಯಿತು. ಆದರೆ, ಅದಕ್ಕಿಂತ ಮುಂಚೆಯೇ ಅವರು ‘ಡೆವಿಲ್’ ಚಿತ್ರದ ಶೂಟಿಂಗ್ ಹಾಗೂ ಡಬ್ಬಿಂಗ್ ಪೂರ್ಣಗೊಳಿಸಿದ್ದರು.

ಪ್ರಸ್ತುತ ಚಿತ್ರ ತಂಡ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಕಲಾವಿದರ ಪೋಸ್ಟರ್‌ಗಳು ಹಂತ ಹಂತವಾಗಿ ಬಿಡುಗಡೆಯಾಗುತ್ತಿದ್ದು, ಡಿಸೆಂಬರ್ 12ರಂದು ಸಿನಿಮಾ ತೆರೆಗೆ ಬರಲಿದೆ ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ದರ್ಶನ್ ಜೊತೆಗೆ ರಚನಾ ರೈ, ಶರ್ಮಿಳಾ ಮಾಂಡ್ರೆ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಪ್ರಕಾಶ್ ವೀರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದಿಂದ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಇದೆ.

ಇದೇ ವೇಳೆ, ದರ್ಶನ್ ಪತ್ನಿ ವಿಜಯಲಕ್ಷ್ಮಿಯವರು ಕೂಡ ಸಿನಿಮಾದ ಪೋಸ್ಟರ್ ಮತ್ತು ಹಾಡುಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಆದರೆ, ದರ್ಶನ್ ಅವರ ಕಾನೂನು ಹೋರಾಟದ ಹಿನ್ನೆಲೆ, ಅವರ ಸಿನಿ ಬದುಕಿನ ಮುಂದಿನ ಹಂತದ ಬಗ್ಗೆ ಚರ್ಚೆಗಳು ನಡೆಯುತ್ತಿವೆ.


Spread the love

LEAVE A REPLY

Please enter your comment!
Please enter your name here