ಮಂಡ್ಯ:- ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಂಡ್ಯ ಕೊಪ್ಪಲು ಬಳಿಯ ನಾಲೆಯಲ್ಲಿ ಬಟ್ಟೆ ತೊಳೆಯುವಾಗ ಕಾಲು ಜಾರಿ ಬಿದ್ದ ಬಾಲಕಿ ರಕ್ಷಣೆಗೆ ಮುಂದಾದ ನಾಲ್ವರು ಮಕ್ಕಳು ನೀರುಪಾಲಾದ ದಾರುಣ ಘಟನೆ ಜರುಗಿದೆ.
Advertisement
ನಿನ್ನೆ ಓರ್ವ ಬಾಲಕಿಯನ್ನು ಸ್ಥಳೀಯರು ಮತ್ತು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ 14 ವರ್ಷದ ಆಯಿಷಾ ಮೃತಪಟ್ಟಿದ್ದಾಳೆ. ಇಂದು 13 ವರ್ಷದ ಆಫ್ರಿನ್ ಮೃತದೇಹ ಪತ್ತೆಯಾಗಿದೆ. ಇನ್ನೂ ಇಬ್ಬರು ಮಕ್ಕಳು ಹನಿ (14) ಮತ್ತು ಥರ್ಬಿಮ್ (13) ನಾಪತ್ತೆಯಾಗಿದ್ದು, ಅವರಿಗಾಗಿ ಹುಡುಕಾಟ ನಡೆಯುತ್ತಿದೆ.
ಮೃತರು ಮತ್ತು ನಾಪತ್ತೆಯಾದವರು ಮೈಸೂರಿನ ಶಾಂತಿನಗರದ ಮದರಸದ ವಿದ್ಯಾರ್ಥಿಗಳು. 15 ಮಕ್ಕಳು ಮತ್ತು ಮೂವರು ಸಿಬ್ಬಂದಿ ಪ್ರವಾಸಕ್ಕಾಗಿ ಮಂಡ್ಯಕ್ಕೆ ಬಂದಿದ್ದರು. ಮಕ್ಕಳು ನಾಲೆಯಲ್ಲಿ ಆಟವಾಡುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.


