ಬೆಂಗಳೂರು: ಗ್ಯಾರಂಟಿ ಕೊಡಿ, ಆದರೆ ಗ್ಯಾರಂಟಿ ಹೆಸರಲ್ಲಿ ಆರ್ಥಿಕ ಪರಿಸ್ಥಿತಿ ಹಾಳು ಮಾಡಬೇಡಿ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾನು ಗ್ಯಾರಂಟಿ ಕೊಡುವುದನ್ನು ವಿರೋಧಿಸುತ್ತಿಲ್ಲ. ಗ್ಯಾರಂಟಿ ಕೊಡಿ, ಆದರೆ ಗ್ಯಾರಂಟಿ ಹೆಸರಲ್ಲಿ ಆರ್ಥಿಕ ಪರಿಸ್ಥಿತಿ ಹಾಳು ಮಾಡಬೇಡಿ. ಮುಂದಿನ ಅಧಿಕಾರ ನಡೆಸುವ ಪೀಳಿಗೆ ಭವಿಷ್ಯ ಹಾಳು ಮಾಡಬೇಡಿ ಎಂದು ಅವರು ಹೇಳಿದ್ದಾರೆ.
ಇನ್ನೂ ಈವರೆಗೆ ಗ್ಯಾರಂಟಿ ಯೋಜನೆಗಳನ್ನೇ ಪ್ರಮುಖವಾಗಿ ಹೇಳುತ್ತಿದ್ದರು. ನುಡಿದಂತೆ ನಡೆದಿದ್ದೇವೆ ಎಂದು ಜನರ ಬ್ರೈನ್ ವಾಷ್ ಮಾಡುತ್ತಿದ್ದರು. ಇದರಿಂದ ಅಭಿವೃದ್ಧಿ ಕೆಲಸ ನಿಲ್ಲಿಸಿದ್ದರು, ಎಲ್ಲಾ ಸ್ಥಗಿತಗೊಳಿಸಿದ್ದರು. ತೆರಿಗೆಯವರಿಗೆ 10 ಸಾವಿರ ಕೋಟಿ ಹೆಚ್ಚಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ.
ಇದು ಯಾವ ಪುರುಷಾರ್ಥಕ್ಕೆ? ಗ್ಯಾರಂಟಿ ಹೆಸರು ಹೇಳಿಕೊಂಡು ಜನರಿಗೆ ಹೊರೆ ಮಾಡಿ, ಜನರ ಹಣ ಕಿತ್ತು ಕಾರ್ಯಕ್ರಮ ಮುಂದುವರಿಸುವುದರಲ್ಲಿ ಅರ್ಥ ಇಲ್ಲ. ಇದರಿಂದ ಕ್ಯಾಪಿಟಲ್ ಅಸೆಟ್ ಆಗುತ್ತಿಲ್ಲ, ಕೇವಲ ಖರ್ಚಾಗುತ್ತಿದೆ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.