ಕೊಡಗು:- ಹೃದಯಾಘಾತದಿಂದ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಸಾವನ್ನಪ್ಪಿರುವ ಘಟನೆ ಜರುಗಿದೆ.
Advertisement
ಚಾಮರಾಜನಗರ ಮೂಲದ ವಿಜಯ್ ಎಂ.ಎನ್ (47) ಮೃತ ದುರ್ಧೈವಿ. ಮೃತ ವಿಜಯ್, ಮಡಿಕೇರಿಯಲ್ಲಿ ಹಲವು ವರ್ಷದಿಂದ ಸೇವೆ ಸಲ್ಲಿಸುತ್ತಿದ್ದರು. ಇದೀಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಪತ್ನಿ ಹಾಗೂ ಇಬ್ಬರು ಮಕ್ಕಳನ್ನ ಹೆಡ್ ಕಾನ್ಸ್ ಟೇಬಲ್ ಅಗಲಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ವಿಜಯ್ ಮೃತ ದೇಹ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆಸ್ಪತ್ರೆಗೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.